ಚಮೋಲಿ/ಉತ್ತರಾಖಂಡ್ : ಹಿಮನದಿ ಸ್ಫೋಟದ ಆರನೇ ದಿನವಾದ ಇಂದು ಸಹ ಚಮೋಲಿ ಜಿಲ್ಲೆಯ ತಪೋವನ್ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇದಕ್ಕೂ ಮುನ್ನ ಗುರುವಾರ, ರಿಷಿಗಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಕಾರಣ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಸುಮಾರು 30 ಜನ ಈ ಸುರಂಗದೊಳಗೆ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ. ಹಾಗಾಗಿ ಇಂದು ಮತ್ತೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟದಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಂದ 36 ಶವಗಳನ್ನು ಈಗಾಗಲೇ ಪತ್ತೆ ಮಾಡಲಾಗಿದೆ. ಇನ್ನೂ 204 ಜನ ನಾಪತ್ತೆಯಾಗಿದ್ದಾರೆ. ಇವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಮತ್ತೆ ರಿಷಿಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿರುವ ಹಿನ್ನೆಲೆ ಈಗಾಗಲೇ ಪೊಲೀಸರು ನದಿ ಸುತ್ತಮುತ್ತಲಿನ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಹಿಮಾವೃತ ಪ್ರದೇಶದಲ್ಲಿ ಒಂದ್ಕೊಂದು ಡಿಕ್ಕಿ ಹೊಡೆದ 130 ವಾಹನ.. ಆರು ಜನ ಸಾವು, ಅನೇಕರಿಗೆ ಗಾಯ!