ETV Bharat / bharat

NEET: ಒಬಿಸಿಗಳಿಗೆ ಶೇ.27, EWS ಗಳಿಗೆ ಶೇ.10 ರಷ್ಟು ಮೀಸಲಾತಿಗೆ ಸುಪ್ರೀಂ ಕೋರ್ಟ್‌ ಅಸ್ತು - SC upholds OBC quota in medical courses

Supreme court on NEET quota reservation: ವೈದ್ಯಕೀಯ ಕೋರ್ಸ್‌ಗಳಿಗೆ ಅಖಿಲ ಭಾರತ ಕೋಟಾದಲ್ಲಿ ಒಬಿಸಿಗಳಿಗೆ ಶೇ.27 ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿ ನೀಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ.

Reservation is not at odds with merit': SC upholds OBC quota in medical courses
NEET ಆಲ್‌ ಇಂಡಿಯಾ ಕೋಟಾದಲ್ಲಿ ಒಬಿಸಿಗಳಿಗೆ ಶೇ.27, EWS ಗಳಿಗೆ ಶೇ.10 ರಷ್ಟು ಮೀಸಲಾತಿಗೆ ಸುಪ್ರೀಂ ಕೋರ್ಟ್‌ ಅಸ್ತು
author img

By

Published : Jan 20, 2022, 1:35 PM IST

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಜಯ ಸಿಕ್ಕಿದ್ದು, ವೈದ್ಯಕೀಯ ಕೋರ್ಸ್‌ಗಳಿಗೆ ಅಖಿಲ ಭಾರತ ಕೋಟಾದಲ್ಲಿ ಒಬಿಸಿಗಳಿಗೆ ಶೇ.27 ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ.

ಇದೇ ವೇಳೆ ಕೋರ್ಟ್‌, ಮೀಸಲಾತಿಯು ಅರ್ಹತೆಗೆ ವಿರುದ್ಧವಾಗಿಲ್ಲ, ಬದಲಿಗೆ ಅದರ ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಏಕಪೀಠ, ಸ್ಪರ್ಧಾತ್ಮಕ ಪರೀಕ್ಷೆಗಳು ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ. ಅದು ಕೆಲವು ವರ್ಗಗಳಿಗೆ ಸೇರಿದೆ. ಅರ್ಹತೆ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು ಎಂದಿದೆ.

ತನ್ನ ನಿರ್ಧಾರಕ್ಕೆ ವಿವರವಾದ ಕಾರಣಗಳನ್ನು ನೀಡಿದ ಸರ್ವೋಚ್ಚ ನ್ಯಾಯಾಲಯ, ಮೀಸಲಾತಿಯು ಅರ್ಹತೆಗೆ ವಿರುದ್ಧವಾಗಿಲ್ಲ. ಆದರೆ ಅದು ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ.

2021ರ ಜುಲೈ 29 ರಂದು ನೀಟ್‌ನಲ್ಲಿ ಅಖಿಲ ಭಾರತ ಕೋಟಾದಡಿ ಒಬಿಸಿ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಕ್ರಮವಾಗಿ ಶೇ.27, ಶೇ.10 ಮೀಸಲಾತಿಯನ್ನ ಕೇಂದ್ರ ಸರ್ಕಾರ ಘೋಷಿಸಿತ್ತು. ಇದನ್ನು ಪ್ರಶ್ನಿಸಿ ನೀಲ್ ಆರೆಲಿಯೊ ನ್ಯೂನ್ಸ್ ನೇತೃತ್ವದ ಅರ್ಜಿದಾರರ ಗುಂಪು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.