ETV Bharat / bharat

ಜಮ್ಮು & ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನಮ್ಮ ಮೊದಲ ಆದ್ಯತೆ: ಜೈರಾಮ್ ರಮೇಶ್

author img

By

Published : Jan 28, 2023, 8:30 PM IST

ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಮರುಸ್ಥಾಪನೆ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನಮ್ಮ ಮೊದಲ ಆದ್ಯತೆ- ಕಾಂಗ್ರೆಸ್​​ ನಾಯಕ ಜೈರಾಮ್ ರಮೇಶ್.

Cong leader Jairam Ramesh
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಕಾಂಗ್ರೆಸ್‌ನ ನಿಲುವು ಕುರಿತು ಪ್ರತಿಕ್ರಿಯಿಸಿದ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಯ ಮರುಸ್ಥಾಪನೆ ಮತ್ತು ರಾಜ್ಯದ ಸ್ಥಾನಮಾನ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಶನಿವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆಯು ರಾಜಕೀಯ ಪಕ್ಷಗಳ ನಡುವಿನ ಮೈತ್ರಿಯ ಬಗ್ಗೆ ಅಲ್ಲ. ಚುನಾವಣೆಗೂ ಮತ್ತು ಇತರ ಸಂಬಂಧಿತ ಪ್ರಕ್ರಿಯೆಗಳಿಗೂ ಯಾವುದೇ ಸಂಬಂಧವಿಲ್ಲ. ಈ ಯಾತ್ರೆಯು 2024ಕ್ಕೆ ವೇದಿಕೆ ಕಲ್ಪಿಸುವ ಉದ್ದೇಶ ಹೊಂದಿದೆ. ಯಾತ್ರೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಜನರು ಭಾಗವಹಿಸಿ ಬೆಂಬಲ ನೀಡಿದರು ಎಂದು ಹೇಳಿದರು.

ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ: 'ರಾಜ್ಯದ ಸ್ಥಾನಮಾನ ಇಲ್ಲಿನ ದೊಡ್ಡ ಸಮಸ್ಯೆ. ಅದಕ್ಕಿಂತ ದೊಡ್ಡದು ಯಾವುದೂ ಇಲ್ಲ. ನಿಮ್ಮ ಹಕ್ಕನ್ನು ಕಸಿಯಲಾಗಿದೆ' ಎಂದು ಅವರು ದೂರಿದರು. ಆಗಸ್ಟ್, 2019ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿತ್ತು.

ಜ.30ರಂದು ಯಾತ್ರೆ ಮುಕ್ತಾಯ: ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಐದು ಜಿಲ್ಲೆಗಳಲ್ಲಿ ಯಾತ್ರೆಯನ್ನು ನಡೆಸಲಾಗಿದೆ. ಜನವರಿ 30ರಂದು ಶ್ರೀನಗರದ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಮಾಡಲಾಗುವುದು. ಬಳಿಕ ಶ್ರೀನಗರದ ಶೇರ್ ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಹುಲ್ ಗಾಂಧಿ ಭಾಷಣದೊಂದಿಗೆ ಯಾತ್ರೆ ಮುಕ್ತಾಯಗೊಳ್ಳಲಿದೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.

ಫಲಿತಾಂಶಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿಯ ಮೇಲೆ ಕಣ್ಣಿಟ್ಟಿದ್ದಾರೆಯೇ ಎಂಬ ಪ್ರಶ್ನೆಗೆ, ಪಕ್ಷವು ಜನರ ಉದ್ದೇಶಕ್ಕಾಗಿ ಶ್ರಮಿಸುತ್ತದೆ ಮತ್ತು ಫಲಿತಾಂಶಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಜೈರಾಮ್ ರಮೇಶ್ ಹೇಳಿದರು.

ಉತ್ತಮ ಪ್ರತಿಕ್ರಿಯೆ: ಈ ಸಂದರ್ಭದಲ್ಲಿ ಮಾತನಾಡಿದ ಜೆಕೆಪಿಸಿಸಿ ಅಧ್ಯಕ್ಷ ವಿಕಾರ್ ರಸೂಲ್, "ಭಾರತ್ ಜೋಡೋ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಸಾವಿರಾರು ಜನರು ಹೇಗೆ ಬಂದರು ಎಂಬುದನ್ನು ನೀವು ಶುಕ್ರವಾರ ನೋಡಿದ್ದೀರಿ. ಆದರೆ ದುರದೃಷ್ಟವಶಾತ್, ಭದ್ರತಾ ಲೋಪದಿಂದಾಗಿ ಯಾತ್ರೆಯನ್ನು ದಿನದ ಮಟ್ಟಿಗೆ ಸ್ಥಗಿತಗೊಳಿಸಬೇಕಾಯಿತು" ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಿಯಾಂಕಾ, ಮೆಹಬೂಬಾ ಮುಫ್ತಿ ಭಾಗಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನಾರಂಭವಾಗಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ಭಾಗವಹಿಸಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ ಲೆಥ್‌ಪೋರಾದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿ ಜತೆ ಪ್ರಿಯಾಂಕಾ ಗಾಂಧಿ ಅವರು ಹೆಜ್ಜೆ ಹಾಕಿದರು.

"ರಾಹುಲ್ ಗಾಂಧಿಯವರ ಯಾತ್ರೆಯು ಕಾಶ್ಮೀರದಲ್ಲಿ ಶುದ್ಧ ಗಾಳಿಯಂತೆ ಬರುತ್ತದೆ. 2019 ರ ನಂತರ ಕಾಶ್ಮೀರಿಗಳು ಇಷ್ಟು ದೊಡ್ಡ ಸಂಖ್ಯೆಯಲ್ಲಿ ತಮ್ಮ ಮನೆಗಳಿಂದ ಹೊರಬರುತ್ತಿರುವುದು ಇದೇ ಮೊದಲು. ಅವನೊಂದಿಗೆ ನಡೆದಾಡುವುದು ಉತ್ತಮ ಅನುಭವವಾಗಿದೆ" ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ. ಯಾತ್ರೆಯು ಅವಂತಿಪೋರಾದಿಂದ ಪುನರಾರಂಭಗೊಂಡಿದ್ದು, ಅಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತು ಅವರ ಮಗಳು ಇಲ್ತಿಜಾ ಮುಫ್ತಿ ಅವರು ಸಹ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದು, ರಾಹುಲ್ ಗಾಂಧಿಗೆ ಸಾಥ್ ನೀಡುತ್ತಿದ್ದಾರೆ.

ಸಿಆರ್‌ಪಿಎಫ್ ಸಿಬ್ಬಂದಿಗೆ ಶ್ರದ್ಧಾಂಜಲಿ: ಈ ವೇಳೆ ರಾಹುಲ್ ಗಾಂಧಿ ಅವರು ಫೆಬ್ರವರಿ 2019 ರಲ್ಲಿ ಲೆಥ್‌ಪೋರಾದಲ್ಲಿ ಉಗ್ರರು ಭದ್ರತಾ ಪಡೆಗಳ ಬಸ್ ಸ್ಫೋಟಿಸಿದ ಸ್ಥಳದಲ್ಲಿ ಪುಷ್ಪಗುಚ್ಛವನ್ನು ಇಟ್ಟು ದಾಳಿಯಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಸೆ.7 ರಂದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯು 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಿದೆ. ಜನವರಿ 30 ರಂದು ಶ್ರೀನಗರದಲ್ಲಿ ಯಾತ್ರೆ ಕೊನೆಗೊಳ್ಳಲಿದೆ.

ಇದನ್ನೂ ಓದಿ: ಕಾಶ್ಮೀರ ತಲುಪಿದ ಭಾರತ್ ಜೋಡೋ ಯಾತ್ರೆ.. ಭದ್ರತೆ ಕಾರಣದಿಂದ ಕೆಲ ಕಾಲ ಸ್ಥಗಿತವಾಗಿದ್ದ ರ‍್ಯಾಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.