ETV Bharat / bharat

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿಯಿಂದ ಅಪ್ರಾಪ್ತೆ ಮೇಲೆ ರೇಪ್​.. ಪ್ರಕರಣ ದಾಖಲು - ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿಯಿಂದ ಅಪ್ರಾಪ್ತೆ ಮೇಲೆ ರೇಪ್

Retired IB officer raped minor: ಗುಪ್ತಚರ ಇಲಾಖೆಯಲ್ಲಿ ಸಬ್​ಇನ್ಸ್​ಪೆಕ್ಟರ್ ಆಗಿ ಸೇವೆ ಸಲ್ಲಿಸಿ, ನಿವೃತ್ತಿಯಾಗಿರುವ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ib officer rape a minor
ib officer rape a minor
author img

By

Published : Mar 9, 2022, 12:12 PM IST

ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ಚಿಮ ದೆಹಲಿಯಲ್ಲಿ ವಾಸವಾಗಿದ್ದ 17 ವರ್ಷದ ಬಾಲಕಿ ತನ್ನ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಕರೋಲ್ ಬಾಗ್​ ಪೊಲೀಸರಿಗೆ ದೂರು ನೀಡಿದ್ದಾಳೆ. ಗುಪ್ತಚರ ಇಲಾಖೆಯಿಂದ ನಿವೃತ್ತರಾಗಿರುವ 60 ವರ್ಷದ ವ್ಯಕ್ತಿ ಈ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾನೆ.

ದೂರಿನಲ್ಲಿ ಬಾಲಕಿ ಹೇಳಿದ್ದೇನು?: ಐಬಿಯಿಂದ ನಿವೃತ್ತರಾಗಿರುವ ವ್ಯಕ್ತಿ ತಮ್ಮ ತಂದೆಯ ಸ್ನೇಹಿತರಾಗಿದ್ದು, ಮೇಲಿಂದ ಮೇಲೆ ಮನೆಗೆ ಭೇಟಿ ನೀಡುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಕರೋಲ್​ಬಾಗ್​ನ ಹೋಟೆಲ್​ಗೆ ತನ್ನನ್ನು ಕರೆದುಕೊಂಡು ಹೋಗಿ, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ದೂರಿದ್ದಾರೆ. ಇದರ ಬಗ್ಗೆ ಹೊರಗಡೆ ಮಾಹಿತಿ ನೀಡಿದರೆ ಕೊಲೆ ಮಾಡುವ ಬೆದರಿಕೆ ಸಹ ಹಾಕಿದ್ದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಆ ವಿಡಿಯೋಗಳನ್ನು ನೋಡುತ್ತಲೇ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರು ಬಾಲಕರು

ಯುವತಿ ದೂರಿನ ಮೇರೆಗೆ ಕರೋಲ್ ಬಾಗ್ ಪೊಲೀಸರು ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ ಆರೋಪಿ ಗುಪ್ತಚರ ಇಲಾಖೆಯಲ್ಲಿ ಸಬ್​ಇನ್ಸ್​ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ. ಬಂಧನಕ್ಕಾಗಿ ಈಗಾಗಲೇ ಪೊಲೀಸ್ ತಂಡ ರಚನೆ ಮಾಡಲಾಗಿದ್ದು, ಶೋಧಕಾರ್ಯ ಮುಂದುವರೆದಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.