ಹೈದರಾಬಾದ್ (ತೆಲಂಗಾಣ) : ಕಾಂಗ್ರೆಸ್ ಸಂಸದ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪಕ್ಷದ ಅಧ್ಯಕ್ಷ ಮಲಿಕಾರ್ಜುನ್ ಖರ್ಗೆ ಅವರೊಂದಿಗೆ ಚರ್ಚಿಸುವುದಾಗಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಹೇಳಿದ್ದಾರೆ.
ಇದನ್ನೂ ಓದಿ : ಮಹಾತ್ಮ ಗಾಂಧೀಜಿ ಕಾನೂನು ಪದವಿ ಪಡೆದಿಲ್ಲ: ಮನೋಜ್ ಸಿನ್ಹಾ ವಿವಾದಾತ್ಮಕ ಹೇಳಿಕೆ
ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷ ಶಿಕ್ಷೆ ವಿಧಿಸಿರುವುದನ್ನು ವಿರೋಧಿಸಿ ನಿನ್ನೆ ರಾಜ್ಯ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸುತ್ತಿದ್ದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ, " ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಂಸದ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಇದು ನಿಜಕ್ಕೂ ಅತ್ಯಂತ ದುರದೃಷ್ಟಕರ ಸಂಗತಿ. ಅವರ ನಡವಳಿಕೆ ಪಕ್ಷದ ಇತರೆ ನಾಯಕರಿಗೆ ಆಶ್ಚರ್ಯ ಉಂಟುಮಾಡಿದೆ. ನಾನು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಮಲಿಕಾರ್ಜುನ್ ಖರ್ಗೆ ಅವರೊಂದಿಗೆ ಚರ್ಚಿಸುತ್ತೇನೆ" ಎಂದು ಹೇಳಿದರು.
ಇದನ್ನೂ ಓದಿ : 'ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇಂದು ಕರಾಳ ದಿನ': ರಾಹುಲ್ ಗಾಂಧಿ ಅನರ್ಹತೆ ಖಂಡಿಸಿದ ಪ್ರತಿಪಕ್ಷದ ನಾಯಕರು
ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. "ನಾನು ಪಿಎಂ ಮೋದಿ ಅವರನ್ನು ಭೇಟಿ ಮಾಡಿದ್ದೇನೆ. ಭುವನಗಿರಿ ಸಂಸತ್ ಕ್ಷೇತ್ರದ ಕುರಿತು ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ. ಹೈದರಾಬಾದ್ ಮೆಟ್ರೋ ರೈಲನ್ನು ಎಲ್‌ಬಿ ನಗರದಿಂದ ಹಯಾತ್ ನಗರಕ್ಕೆ ವಿಸ್ತರಿಸಲು ಮನವಿ ಮಾಡಿದ್ದೇನೆ. ಇದಕ್ಕಾಗಿ ಉನ್ನತ ಮಟ್ಟದಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದ್ದೇನೆ" ಎಂದು ಕೋಮಟಿರೆಡ್ಡಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ರಾಹುಲ್ ಗಾಂಧಿ ಅನರ್ಹತೆ ವಿಚಾರ: ಸತ್ಯ ಹೇಳಿದವರಿಗೆ ಬಿಜೆಪಿ ಶಿಕ್ಷೆ ಕೊಡಲು ಹೊರಟಿದೆ ಎಂದ ಸಿದ್ಧರಾಮಯ್ಯ
ಈ ಹಿಂದೆ ಶೋಕಾಸ್ ನೋಟಿಸ್ ಜಾರಿ : ಇನ್ನು ಈ ಹಿಂದೆ ಕೂಡ ಮುನುಗೋಡು ವಿಧಾನಸಭಾ ಉಪಚುನಾವಣೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ತೆಲಂಗಾಣದ ಪಕ್ಷದ ಸಂಸದ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿರುವ ತಮ್ಮ ಸಹೋದರನಿಗೆ ಬೆಂಬಲ ನೀಡುವಂತೆ ಸೂಚಿಸಿದ ಧ್ವನಿ ಮುದ್ರಣವೊಂದು ವೈರಲ್ ಆಗಿತ್ತು. ಹೀಗಾಗಿ, ಪಕ್ಷದ ನಿಯಮದ ಪ್ರಕಾರ, 'ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ತೆಗೆದುಕೊಳ್ಳಬಾರದು ಎಂದು 10 ದಿನಗಳಲ್ಲಿ ವಿವರಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್ ಅಂದು ನೋಟಿಸ್ ನೀಡಿದ್ದರು.
ಇದನ್ನೂ ಓದಿ : ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಸೇಡಿನ ರಾಜಕಾರಣ: ಎಂ ಬಿ ಪಾಟೀಲ