ನವದೆಹಲಿ: ತಮಿಳುನಾಡಿನ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಅಲ್ಲಿನ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಇದಕ್ಕೆ ಕೇಂದ್ರ ಸರ್ಕಾರ ಗರಂ ಆಗಿದೆ. ಜತೆಗೆ ಆದೇಶ ಹಿಂತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.
ಎಐಎಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಕಳೆದ ವಾರ ಈ ಅವಕಾಶ ನೀಡಿ ಆದೇಶ ಹೊರಹಾಕಿತ್ತು. ಈ ನಿರ್ಧಾರ ಹಿಂತೆಗೆದುಕೊಳ್ಳಿ ಎಂದು ತಿಳಿಸಿರುವ ಕೇಂದ್ರ ಆದೇಶ ರದ್ದುಗೊಳಿಸುವಂತೆ ತಿಳಿಸಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಕ್ಕೆ ಇನ್ನೂ ಅನುಮತಿ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಜನವರಿ 31ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ತಿಳಿಸಿದೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ಶೇ.100ರಷ್ಟು ಆಸನಗಳಿಗೆ ಅವಕಾಶ ನೀಡಿ ತಮಿಳುನಾಡು ಹೊರಡಿಸಿದ್ದ ಆದೇಶ ಅನೇಕ ವಿವಾದಗಳಿಗೆ ಕಾರಣವಾಗಿತ್ತು. ಎರಡು ದಿನಗಳ ಹಿಂದೆ ಕೇರಳ ಸರ್ಕಾರ ಕೂಡ ಶೇ.50ರಷ್ಟು ಆಸನಗಳಿಗೆ ಅನುಮತಿ ನೀಡಿ ಅವಕಾಶ ಹೊರಡಿಸಿದೆ.