ETV Bharat / bharat

ಧಾರ್ಮಿಕ ಬಾವುಟ ಹಾರಿಸುವ ವಿಚಾರಕ್ಕೆ ಕೋಮು ಗಲಭೆ: 36 ಜನರ ಬಂಧನ - ಈಟಿವಿ ಭಾರತ ಕನ್ನಡ

ಧಮೀಜಿ ಕಾ ಡೇರಾ ಪ್ರದೇಶದ ವಿದ್ಯುತ್ ಕಂಬದ ಮೇಲೆ ಮತ್ತೊಂದು ಸಮುದಾಯದ ಜನತೆ ತಮ್ಮ ಧ್ವಜದ ಜೊತೆಗೆ ಅವರ ಧಾರ್ಮಿಕ ಧ್ವಜ ಹಾಕಲು ಪ್ರಯತ್ನಿಸುತ್ತಿರುವುದನ್ನು ಜನರ ಗುಂಪೊಂದು ವಿರೋಧಿಸಿದ ನಂತರ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ ಎಂದು ಸಾವ್ಲಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಧಾರ್ಮಿಕ ಬಾವುಟ ಹಾರಿಸುವ ವಿಚಾರಕ್ಕೆ ಗಲಭೆ: 36 ಜನರ ಬಂಧನ
riot-over-religious-flag-hoisting-36-people-arrested
author img

By

Published : Oct 3, 2022, 11:27 AM IST

ವಡೋದರಾ (ಗುಜರಾತ್): ಗುಜರಾತ್‌ನ ವಡೋದರಾ ಜಿಲ್ಲೆಯ ಸಾವ್ಲಿ ಪಟ್ಟಣದಲ್ಲಿ ಧಾರ್ಮಿಕ ಬಾವುಟ ಹಾರಿಸುವ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಪರಸ್ಪರ ಘರ್ಷಣೆ ಮತ್ತು ಕಲ್ಲು ತೂರಾಟ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 36 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಧಮೀಜಿ ಕಾ ಡೇರಾ ಪ್ರದೇಶದ ವಿದ್ಯುತ್ ಕಂಬದ ಮೇಲೆ ಮತ್ತೊಂದು ಸಮುದಾಯದ ಜನತೆ ತಮ್ಮ ಧ್ವಜದ ಜೊತೆಗೆ ಅವರ ಧಾರ್ಮಿಕ ಧ್ವಜ ಹಾಕಲು ಪ್ರಯತ್ನಿಸುತ್ತಿರುವುದನ್ನು ಜನರ ಗುಂಪೊಂದು ವಿರೋಧಿಸಿದ ನಂತರ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ ಎಂದು ಸಾವ್ಲಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಬಾವುಟ ವಿಚಾರ ಉಲ್ಬಣಗೊಂಡು ಎರಡೂ ಸಮುದಾಯದವರು ಪರಸ್ಪರ ಕಲ್ಲು ತೂರಾಟ ಆರಂಭಿಸಿದರು. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಆದರೆ ಕೆಲ ವಾಹನ ಮತ್ತು ಅಂಗಡಿಗಳಿಗೆ ಗಲಭೆಯಲ್ಲಿ ಹಾನಿಯಾಗಿದೆ ಎಂದು ಸಾವ್ಲಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಎಆರ್ ಮಹಿದಾ ಹೇಳಿದ್ದಾರೆ.

ಶನಿವಾರ ತಡರಾತ್ರಿ ಎರಡೂ ಗುಂಪುಗಳು ದೂರು - ಪ್ರತಿದೂರು ದಾಖಲಿಸಿವೆ. ಗಲಭೆ, ಕಾನೂನುಬಾಹಿರ ಸಭೆ, ಮಾನವ ಜೀವಕ್ಕೆ ಅಪಾಯವನ್ನುಂಟುಮಾಡುವ ದುಷ್ಕೃತ್ಯ ಇತ್ಯಾದಿಗಳಿಗಾಗಿ 43 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎರಡೂ ಸಮುದಾಯದ ಒಟ್ಟು 36 ಜನರನ್ನು ಇದುವರೆಗೆ ಬಂಧಿಸಲಾಗಿದೆ ಎಂದು ಅವರು ಹೇಳಿದರು. ಕೋಮು ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಕೇಜ್ರಿವಾಲ್​ರನ್ನು ಊಟಕ್ಕೆ ಆಹ್ವಾನಿಸಿದ್ದ ಗುಜರಾತ್​ನ ಆಟೋ ಚಾಲಕ ಬಿಜೆಪಿ ಸೇರ್ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.