ನವದೆಹಲಿ : ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಹಾಗೂ ಭಾರತದ ವಿಕೆಟ್ಕೀಪರ್ ರಿಷಬ್ ಪಂತ್ಗೆ ಹರಿಯಾಣದ ಕ್ರಿಕೆಟಿಗ ಮೃಣಾಕ್ ಸಿಂಗ್ 1.63 ಕೋಟಿಗೂ ಅಧಿಕ ಮೊತ್ತ ವಂಚಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಈ ಸಂಬಂಧ ಈ ಹಿಂದೆಯೇ ಮೃಣಾಕ್ ವಿರುದ್ಧ ಪಂತ್ ಮ್ಯಾನೇಜರ್ ಪುನೀತ್ ಸೋಲಂಕಿ ವಂಚನೆ ಪ್ರಕರಣ ದಾಖಲಿಸಿದ್ದರು. ಇದೀಗ ಬೇರೊಂದು ಪ್ರಕರಣದಲ್ಲಿ ಮೃಣಾಕ್ರನ್ನು ಪೊಲೀಸರು ಬಂಧಿಸಿದ್ದು, ಇದರ ಬೆನ್ನಲ್ಲೇ ರಿಷಭ್ ಪಂತ್ ವಂಚನೆಗೊಳಗಾಗಿರುವ ಮಾಹಿತಿ ಹೊರಬಿದ್ದಿದೆ.
ಉದ್ಯಮಿಯೊಬ್ಬರಿಗೆ ಅಗ್ಗದ ದರದಲ್ಲಿ ದುಬಾರಿ ವಾಚ್ ಮತ್ತು ಮೊಬೈಲ್ ಫೋನ್ಗಳನ್ನು ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಮೃಣಾಕ್ ವಿರುದ್ದ ಪ್ರಕರಣ ದಾಖಲಾಗಿತ್ತು. ಇದೀಗ ಹರಿಯಾಣ ಕ್ರಿಕೆಟಿಗನಿಂದ ರಿಷಬ್ ಪಂತ್ ಕೂಡ ಮೋಸ ಹೋಗಿರುವ ವಿಚಾರ ಬಹಿರಂಗವಾಗಿದೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಮೃಣಾಕ್ ಸಿಂಗ್ 1 ಕೋಟಿ 63 ಲಕ್ಷ ಚೆಕ್ ಬೌನ್ಸ್ ಮಾಡುವ ಮೂಲಕ ರಿಷಭ್ ಪಂತ್ಗೆ ವಂಚಿಸಿದ್ದಾರೆ ಎಂದು ಮ್ಯಾನೇಜರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಉದ್ಯಮಿಯೊಬ್ಬರಿಗೆ 6 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ಜುಹು ಪೊಲೀಸರು ಈ ತಿಂಗಳ ಆರಂಭದಲ್ಲಿ ಮೃಣಾಕ್ನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಡಿಆರ್ಎಸ್ ಪಡೆಯದೆ ಎಡವಿದ ಡೆಲ್ಲಿ: ನಿರ್ಧಾರದ ಹಿಂದಿನ ಕಾರಣ ತಿಳಿಸಿದ ಪಂತ್