ಸಿಂಗಾಪುರ್: ಲಾಲು ಯಾದವ್ ಅವರು ಸಿಂಗಾಪುರದಲ್ಲಿ ಯಶಸ್ವಿಯಾಗಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಈ ಮಾಹಿತಿಯನ್ನು ಲಾಲು ಯಾದವ್ ಪುತ್ರ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ. ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಲಾಲು ಯಾದವ್‌ಗೆ ಕಿಡ್ನಿ ದಾನ ಮಾಡಿದ್ದು, ರೋಹಿಣಿ ಆಚಾರ್ಯ ಮತ್ತು ಲಾಲು ಯಾದವ್ ಇಬ್ಬರೂ ಆರೋಗ್ಯವಾಗಿದ್ದಾರೆ.
-
पापा का किडनी ट्रांसप्लांट ऑपरेशन सफलतापूर्वक होने के बाद उन्हें ऑपरेशन थियेटर से आईसीयू में शिफ्ट किया गया।
— Tejashwi Yadav (@yadavtejashwi) December 5, 2022 " class="align-text-top noRightClick twitterSection" data="
डोनर बड़ी बहन रोहिणी आचार्य और राष्ट्रीय अध्यक्ष जी दोनों स्वस्थ है। आपकी प्रार्थनाओं और दुआओं के लिए साधुवाद। 🙏🙏 pic.twitter.com/JR4f3XRCn2
">पापा का किडनी ट्रांसप्लांट ऑपरेशन सफलतापूर्वक होने के बाद उन्हें ऑपरेशन थियेटर से आईसीयू में शिफ्ट किया गया।
— Tejashwi Yadav (@yadavtejashwi) December 5, 2022
डोनर बड़ी बहन रोहिणी आचार्य और राष्ट्रीय अध्यक्ष जी दोनों स्वस्थ है। आपकी प्रार्थनाओं और दुआओं के लिए साधुवाद। 🙏🙏 pic.twitter.com/JR4f3XRCn2पापा का किडनी ट्रांसप्लांट ऑपरेशन सफलतापूर्वक होने के बाद उन्हें ऑपरेशन थियेटर से आईसीयू में शिफ्ट किया गया।
— Tejashwi Yadav (@yadavtejashwi) December 5, 2022
डोनर बड़ी बहन रोहिणी आचार्य और राष्ट्रीय अध्यक्ष जी दोनों स्वस्थ है। आपकी प्रार्थनाओं और दुआओं के लिए साधुवाद। 🙏🙏 pic.twitter.com/JR4f3XRCn2
ಲಾಲು ಪ್ರಸಾದ್ ಯಾದವ್ ಅವರ ಮಗಳು ರೋಹಿಣಿ ಸಿಂಗಾಪುರದಲ್ಲಿ ನೆಲೆಸಿದ್ದು, ಲಾಲು ಅವರು ಅಕ್ಟೋಬರ್‌ನಲ್ಲಿ ಸಿಂಗಾಪುರಕ್ಕೆ ಹೋಗಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದರು. ಹೀಗಾಗಿ ತಂದೆಗೆ ಕಿಡ್ನಿ ದಾನ ಮಾಡಲು ರೋಹಿಣಿ ಮುಂದಾಗಿದ್ದರು.
ಲಾಲು ತಮ್ಮ ಜೀವ ಉಳಿಸಿಕೊಳ್ಳಲು ಮಗಳ ಮೂತ್ರಪಿಂಡ ಸ್ವೀಕರಿಸಲು ನಿರಾಕರಿಸಿದ್ದರು. ಆದರೆ, ಕುಟುಂಬದ ಸದಸ್ಯರೊಬ್ಬರ ಕಿಡ್ನಿ ಕಸಿ ಮಾಡಿದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗುವ ಸಾಧ್ಯತೆ ಹೆಚ್ಚಿದ್ದರಿಂದ ಮಗಳ ಒತ್ತಾಯಕ್ಕೆ ಮಣಿದು ಲಾಲು ಒಪ್ಪಿದ್ದರು. ಶಸ್ತ್ರಚಿಕಿತ್ಸೆಗಾಗಿ ಲಾಲು ಸಿಂಗಾಪುರಕ್ಕೆ ತೆರಳಿದ್ದರು. ಈಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ತಂದೆ - ಮಗಳು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ, ಲಾಲು ತಮ್ಮ ಮೂತ್ರಪಿಂಡ ಮತ್ತು ಹೃದಯದ ತೊಂದರೆಯಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಲ್ಲಿ ವೈದ್ಯರು ಅವರಿಗೆ ಮೂತ್ರಪಿಂಡ ಕಸಿ ಮಾಡುವಂತೆ ಸೂಚಿಸಿರಲಿಲ್ಲ. ಆದರೆ, ತಂದೆಯ ಆರೋಗ್ಯದ ಬಗ್ಗೆ ತುಂಬಾ ಚಿಂತಿತರಾಗಿದ್ದ ರೋಹಿಣಿ ಅವರನ್ನು ಸಿಂಗಾಪುರದ ವೈದ್ಯಕೀಯ ತಂಡಕ್ಕೆ ತೋರಿಸಿದ್ದರು.
ಆಗ ಲಾಲು ಅವರಿಗೆ ಕಿಡ್ನಿ ಕಸಿ ಮಾಡುವಂತೆ ವೈದ್ಯರು ಸೂಚಿಸಿದರು. ಲಾಲು ಅವರ ಕಿಡ್ನಿ ಆಪರೇಷನ್ ನವೆಂಬರ್‌ನಲ್ಲಿ ನಡೆಯಲಿದೆ ಎಂದು ಅವರ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಇತ್ತೀಚೆಗೆ ಬಹಿರಂಗಪಡಿಸಿದ್ದರು. ಆದರೆ ಈ ಶಸ್ತ್ರಚಿಕಿತ್ಸೆ ಕಾರಣಾಂತರದಿಂದ ಇಂದು ನಡೆದಿದೆ.
ಓದಿ: ಕಿಡ್ನಿ ವೈಫಲ್ಯ: ಬಡ ಬಾಲಕನ ನೆರವಿಗೆ ಬಂದ ಅಪ್ಪು ಅಭಿಮಾನಿಗಳು, ಹೆಚ್ಚಿನ ಸಹಾಯಕ್ಕೆ ಮೊರೆ