ETV Bharat / bharat

ಡಿಸ್ಚಾರ್ಜ್‌ ಆದ ಕೆಲವೇ ಗಂಟೆಗಳಲ್ಲಿ ಮತ್ತೆ ಆಸ್ಪತ್ರೆ ಸೇರಿದ ಲಾಲೂ ಪ್ರಸಾದ್‌

author img

By

Published : Mar 23, 2022, 4:05 PM IST

ತೀವ್ರ ಅನಾರೋಗ್ಯದಿಂದಾಗಿ ಬಳಲುತ್ತಿರುವ ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಯಿಂದ ಬಿಡುಗಡೆಯಾದ​ ಕೆಲವೇ ಹೊತ್ತಲ್ಲಿ ಮತ್ತೆ ಆಸ್ಪತ್ರೆ ಸೇರಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.

RJD leader Lalu Prasad Yadav admitted at AIIMS Delhi

ನವದೆಹಲಿ: ಅನಾರೋಗ್ಯದಿಂದಾಗಿ ರಿಮ್ಸ್​​ನಿಂದ(ರಾಂಚಿ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ) ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದ ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಡಿಸ್ಚಾರ್ಜ್​ ಆಗಿ ಕೆಲವೇ ಗಂಟೆಗಳಲ್ಲಿ ಮರಳಿ ಆಸ್ಪತ್ರೆಗೆ ದಾಖಲಾದರು. ಆರೋಗ್ಯ ಸ್ಥಿತಿ ಹದೆಗೆಟ್ಟ ಕಾರಣ ನಿನ್ನೆ ಅವರನ್ನು ರಿಮ್ಸ್​ಗೆ ದಾಖಲಿಸಲಾಗಿತ್ತು. ಇದಾದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ 9 ಗಂಟೆಗೆ ದೆಹಲಿ ಏಮ್ಸ್​​ಗೆ ವರ್ಗಾವಣೆ ಮಾಡಲಾಗಿದೆ.

ಲಾಲುಗೆ ಬಹು ಆರೋಗ್ಯ ಸಮಸ್ಯೆ: ಮೂತ್ರಪಿಂಡ, ರಕ್ತದೊತ್ತಡ ಸೇರಿದಂತೆ ಅನೇಕ ಸಮಸ್ಯೆಗಳಿಂದ ಲಾಲೂ ಪ್ರಸಾದ್ ಯಾದವ್​​ ಬಳಲುತ್ತಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಪುತ್ರ ತೇಜಸ್ವಿ ಯಾದವ್, ಏಮ್ಸ್​​ನಲ್ಲಿ ತಂದೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರ ರಕ್ತದಲ್ಲಿ ಸಕ್ಕರೆ ಅಂಶ ಮತ್ತು ರಕ್ತದೊತ್ತಡದಲ್ಲಿ ಏರಿಳಿತವಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಶಾಲೆಗೆ ಮರಳುತ್ತಿರುವ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ನೀಡಿ: ಸೋನಿಯಾ ಗಾಂಧಿ

ಮೇವು ಹಗರಣದಲ್ಲಿ ದೋಷಿಯಾಗಿರುವ ಲಾಲೂ ಪ್ರಸಾದ್,​​​ 139 ಕೋಟಿ ರೂ. ದುರುಪಯೋಗ ಪಡಿಸಿಕೊಂಡಿರುವ ಗಂಭೀರ ಪ್ರಕರಣ ಎದುರಿಸುತ್ತಿದ್ದಾರೆ. ಸಿಬಿಐನ ವಿಶೇಷ ನ್ಯಾಯಾಲಯ ಅವರಿಗೆ ಈಗಾಗಲೇ 5 ವರ್ಷ ಜೈಲು ಶಿಕ್ಷೆ, 60 ಲಕ್ಷ ರೂ. ದಂಡ ವಿಧಿಸಿದೆ. ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.