ನವದೆಹಲಿ/ಬಿಹಾರ: ದೆಹಲಿಯ ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರ್‌ಜೆಡಿ ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದೀನ್ ಇಂದು ಕೋವಿಡ್ನಿಂದ ನಿಧನರಾಗಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಹಾಬುದ್ದೀನ್ರಿಗೆ ಏ.21ರಂದು ಸೋಂಕು ತಗುಲಿದ್ದ ಕಾರಣ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 16 ಮಂದಿ ದುರ್ಮರಣ
ಬಿಹಾರದ ಸಿವಾನ್ ಹಾಗೂ ಬಾಹುಬಲಿ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿ ಹಾಗೂ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಹಾಬುದ್ದೀನ್, ಕೊಲೆ ಪ್ರಕರಣವೊಂದರಲ್ಲಿ ದೋಷಿ ಎಂಬುದು ಸಾಬೀತಾಗಿ ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಇವರ ವಿರುದ್ಧ 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.