ನವದೆಹಲಿ: ಆರ್ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ತಕ್ಷಣವೇ ಅವರನ್ನು ದೆಹಲಿಯ ಏಮ್ಸ್ನ ತುರ್ತು ನಿಗಾ ಘಟಕಕ್ಕೆ ದಾಖಲು ಮಾಡಲಾಗಿದೆ.
ಹಿರಿಯ ರಾಜಕಾರಣಿ ಲಾಲು ಪ್ರಸಾದ್ ಯಾದವ್ ಜ್ವರ, ದಣಿವಿನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅವರ ರಕ್ತದ ಮಾದರಿ ಪರೀಕ್ಷೆಗಾಗಿ ರವಾನೆ ಮಾಡಲಾಗಿದ್ದು, ವರದಿಗೋಸ್ಕರ ಕಾಯುತ್ತಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ: ತೆರೆದ ಜೀಪ್ ಚಲಾಯಿಸಿ ತಾನಿನ್ನೂ ಗಟ್ಟಿಯಾಗಿದ್ದೇನೆ ಎಂಬ ಸಂದೇಶ ರವಾನಿಸಿದ ಲಾಲೂ
ಬಹುಕೋಟಿ ಮೇವು ಹಗರಣದ ಪ್ರಮುಖ ಆರೋಪಿಯಾಗಿರುವ ಲಾಲು ಪ್ರಸಾದ್ ಯಾದವ್, ಈಗಾಗಲೇ ಜಾಮೀನು ಮೇಲೆ ಹೊರಗಿದ್ದು, ಕಳೆದ ಕೆಲ ತಿಂಗಳ ಹಿಂದೆ ಆರೋಗ್ಯ ತಪಾಸಣೆಗೋಸ್ಕರ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಗೆ ಭೇಟಿ ನೀಡಿದ್ದರು. 73 ವರ್ಷದ ಲಾಲು ಕಳೆದ ಕೆಲ ದಿನಗಳ ಹಿಂದೆ ತೆರೆದ ಜೀಪ್ ಡ್ರೈವ್ ಮಾಡುವ ಮೂಲಕ ಕಚೇರಿಗೆ ತೆರಳಿದ್ದರು. ಇದರ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು.