ETV Bharat / bharat

ಎರಡು ಟೆಂಪೋಗಳಿಗೆ ಡಿಕ್ಕಿ ಹೊಡೆದ ಟ್ರಕ್​.. ಸ್ಥಳದಲ್ಲೇ ಆರು ಮಂದಿ ಸಾವು - ಎರಡು ಟೆಂಪೋಗಳಿಗೆ ಡಿಕ್ಕಿ ಹೊಡೆದ ಟ್ರಕ್

ಟ್ರಕ್​ವೊಂದು ಎರಡು ಟೆಂಪೋಗಳಿಗೆ ಡಿಕ್ಕಿ ಹೊಡೆದಿರುವ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Road accident
Road accident
author img

By

Published : Aug 25, 2021, 5:36 PM IST

ಬದೌನ್​(ಉತ್ತರ ಪ್ರದೇಶ): ಭೀಕರ ರಸ್ತೆ ಅಪಘಾತವೊಂದರಲ್ಲಿ ಆರು ಮಂದಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬದೌನ್​ದಲ್ಲಿ ಸಂಭವಿಸಿದೆ.

ಕಲ್ಲಿದ್ದಲು ಹೊತ್ತು ಸಾಗುತ್ತಿದ್ದ ಟ್ರಕ್​​ವೊಂದು ಎರಡು ಟೆಂಪೋಗಳಿಗೆ ಡಿಕ್ಕಿ ಹೊಡೆದಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರರಕಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಮದುವೆಗೆ ಹೊರಟವರು ಮಸಣಕ್ಕೆ.. ಚಲಿಸುತ್ತಿದ್ದ ಆಟೋದಿಂದ ಬಿದ್ದು ನಾಲ್ವರ ಸಾವು

ಘಟನೆಯಲ್ಲಿ ಸಾವನ್ನಪ್ಪಿದ್ದವರ ಪೈಕಿ ಓರ್ವನನ್ನ ಕುನರ್​ಗಾಂವ್​ನ ಮನೀಶ್​ ಪಾಲ್​ ಎಂದು ಗುರುತಿಸಲಾಗಿದ್ದು, ಉಳಿದ ಐವರ ಮೃತದೇಹಗಳ ಗುರುತು ಪತ್ತೆ ಪ್ರಕ್ರಿಯೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.