ಪುರ್ನಿಯಾ(ಬಿಹಾರ): ಪುರ್ನಿಯಾದ ಜಲಾಲ್‌ಗಢ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಎಂಟು ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 57ರಲ್ಲಿ ಪೈಪ್ ತುಂಬಿದ ಟ್ರಕ್ ಪಲ್ಟಿಯಾಗಿದೆ. ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನತದೃಷ್ಟ ವಾಹನದಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದಿಬ್ಬಣದ ವಾಹನ-ಕಾರು ಮಧ್ಯೆ ಡಿಕ್ಕಿ: ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ
ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಟ್ರಕ್ ಕುರಿತಾಗಿ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.