ತಿರುಮಲ(ಆಂಧ್ರಪ್ರದೇಶ) : ಆಂಧ್ರಪ್ರದೇಶ ಸರ್ಕಾರಿ ಬಸ್ವೊಂದು ಜಿಂಕೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿರುಮಲದಲ್ಲಿ ನಡೆದಿದೆ. ಪ್ರಾಣ ಬಿಡುವುದಕ್ಕೂ ಮುಂಚಿತವಾಗಿ ಮುದ್ದಾದ ಮರಿಗೆ ಜನ್ಮ ನೀಡಿದೆ.
ತಿರುಮಲದ ಕನುಮ ಮಾರ್ಗದ ಆಂಜನೇಯಸ್ವಾಮಿ ದೇವಸ್ಥಾನದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದಿರುವ ಬಸ್ವೊಂದು ಜಿಂಕೆಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಜಿಂಕೆ, ಅದೇ ನೋವಲ್ಲಿ ಮರಿಗೆ ಜನ್ಮ ನೀಡಿ ಪ್ರಾಣ ಬಿಟ್ಟಿದೆ. ಇದನ್ನ ನೋಡಿರುವ ಸ್ಥಳೀಯರು ಮಮ್ಮಲ ಮರಗಿದ್ದಾರೆ.
ಇದನ್ನೂ ಓದಿರಿ: ಬೆಂಗಳೂರು: ಹೆಂಡ್ತಿ ಆಸೆ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅವರು, ನವಜಾತ ಜಿಂಕೆ ಮರಿಯನ್ನ ತಿರುಪತಿ ಮೃಗಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ