ETV Bharat / bharat

ಭೀಕರ ರಸ್ತೆ ಅಪಘಾತ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ, 12 ಮಂದಿಗೆ ಗಾಯ

ಉತ್ತರ ಪ್ರದೇಶದಲ್ಲಿ ಕಟಾವು ಮಾಡಲು ಟ್ರ್ಯಾಕ್ಟರ್​ನಲ್ಲಿ ತೆರಳುತ್ತಿದ್ದ ನಾಲ್ವರು ಕೂಲಿ ಕಾರ್ಮಿಕರು ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ಧಾರೆ.

Road Accident in uttarapradesha
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ
author img

By

Published : Sep 25, 2022, 2:46 PM IST

Updated : Sep 25, 2022, 2:55 PM IST

ಲಲಿತ್‌ಪುರ: ಉತ್ತರ ಪ್ರದೇಶದ ಲಲಿತ್‌ಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ.

ಝಾನ್ಸಿಯಿಂದ ಬರುತ್ತಿದ್ದ ಟ್ರಕ್ ಲಲಿತ್‌ಪುರದ ಕೊತ್ವಾಲಿ ತಾಲ್ಬೆಹತ್ ರಾಷ್ಟ್ರೀಯ ಹೆದ್ದಾರಿ ಬಳಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ 12 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 8 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಝಾನ್ಸಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ

ಇದನ್ನೂ ಓದಿ: ಅಂಕಿತಾ ಭಂಡಾರಿ ನೀರಿನಲ್ಲಿ ಮುಳುಗಿ ಸಾವು.. ತಾತ್ಕಾಲಿಕ ಮರಣೋತ್ತರ ಪರೀಕ್ಷೆ ವರದಿಗೆ ಪೋಷಕರ ಆಕ್ಷೇಪ

ಮೃತರನ್ನು ಬಮ್ಹೋರಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಕಟಾವು ಮಾಡಲು ಬಾಮ್ಹೋರಿ ಗ್ರಾಮದಿಂದ ತಾಲ್ಬೆಹತ್‌ಗೆ ಬರುತ್ತಿದ್ದರು ಎಂದು ಹೇಳಲಾಗಿದೆ. ಈ ವೇಳೆ ಟ್ರ್ಯಾಕ್ಟರ್‌ನಲ್ಲಿ ಸುಮಾರು 25 ಮಂದಿ ತೆರಳುತ್ತಿದ್ದರು. ಝಾನ್ಸಿ ಕಡೆಯಿಂದ ಬರುತ್ತಿದ್ದ ಟ್ರ್ಯಾಕ್ಟರ್​ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Last Updated : Sep 25, 2022, 2:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.