ETV Bharat / bharat

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಪ್ರತ್ಯೇಕ ಅಪಘಾತದಲ್ಲಿ 7 ಸಾವು, 30 ಮಂದಿಗೆ ಗಾಯ - ಕನ್ನೌಜ್​ನಲ್ಲಿ ಭೀಕರ ರಸ್ತೆ ಅಪಘಾತ

ಉತ್ತರಪ್ರದೇಶದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿದೆ.

agra lucknow expressway road accident  kannauj road accident  bus collided with truck in kannauj  accident on agra lucknow expressway in kannauj  ಉತ್ತರಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ  ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ  ಪ್ರತ್ಯೇಕ ಅಪಘಾತದಲ್ಲಿ 7 ಜನ ಸಾವು  ಎರಡು ಪ್ರತ್ಯೇಕ ಅಪಘಾತ  ಆಗ್ರ ಲಖನೌ ಎಕ್ಸ್​ಪ್ರೆಸ್​ವೇನಲ್ಲಿ ಸಂಭವಿಸಿದ ಎರಡು ಅಪಘಾತ  ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ  ಕನ್ನೌಜ್​ನಲ್ಲಿ ಭೀಕರ ರಸ್ತೆ ಅಪಘಾತ  ಉನ್ನಾವೋದಲ್ಲಿ ಭೀಕರ ರಸ್ತೆ ಅಪಘಾತ
ಉತ್ತರಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ
author img

By

Published : Jan 9, 2023, 10:43 AM IST

ಲಖನೌ (ಉತ್ತರಪ್ರದೇಶ) : ಆಗ್ರ-ಲಖನೌ ಎಕ್ಸ್​ಪ್ರೆಸ್​ವೇಯಲ್ಲಿ ಜರುಗಿದ ಎರಡು ರಸ್ತೆ ಅಪಘಾತಗಳಲ್ಲಿ ಸುಮಾರು 7 ಜನ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ನೌಜ್​ನಲ್ಲಿ ಮೂವರು ಸಾವು: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯ ಥಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರೌಲಿ ಗ್ರಾಮದ ಬಳಿ ಇಂದು ನಸುಕಿನ ಜಾವ ದಟ್ಟ ಮಂಜಿನಿಂದಾಗಿ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ನೆಲಕ್ಕುರುಳಿತು. ಇದರಲ್ಲಿ 11 ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಸುಮಾರು 17 ಪ್ರಯಾಣಿಕರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಯುಪಿಐಡಿಎ ತಂಡ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಆರು ಮಂದಿಯನ್ನು ವೈದ್ಯಕೀಯ ಕಾಲೇಜು ತಿರ್ವಾಗೆ ದಾಖಲಿಸಲಾಗಿದೆ. ಬಸ್ ದೆಹಲಿಯಿಂದ ಲಖನೌಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ.

ಖಾಸಗಿ ಸ್ಲೀಪರ್ ಬಸ್ ದೆಹಲಿಯಿಂದ ಪ್ರಯಾಣಿಕರನ್ನು ಹೊತ್ತು ಲಖನೌಗೆ ತೆರಳುತ್ತಿತ್ತು. ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಥಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರೌಲಿ ಗ್ರಾಮದ ಬಳಿ ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ದಟ್ಟ ಮಂಜಿನಿಂದಾಗಿ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್ ನಿಯಂತ್ರಣ ಕಳೆದುಕೊಂಡು ಎಕ್ಸ್‌ಪ್ರೆಸ್‌ವೇಯ ಕೆಳಗೆ ಬಿದ್ದಿದೆ. ಬಸ್ ಬಿದ್ದ ತಕ್ಷಣ ಪ್ರಯಾಣಿಕರಲ್ಲಿ ನೂಕುನುಗ್ಗಲು ಉಂಟಾಗಿದೆ. ಬಸ್​ನಿಂದ ಕಿರುಚಾಟ ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡರು.

ಅಪಘಾತದಲ್ಲಿ ರಾಯ್ ಬರೇಲಿ ಜಿಲ್ಲೆಯ ಕೃಷ್ಣ ನಗರ ಮೊಹಲ್ಲಾ ನಿವಾಸಿಗಳಾದ ಅನಿತಾ ಬಾಜಪೇಯಿ (50), ಸಂಜನಾ (25) ಮತ್ತು ದೇವಾಂಶ್ (11) ಸ್ಥಳದಲ್ಲೇ ಮೃತಪಟ್ಟಿದ್ದು, 17 ಪ್ರಯಾಣಿಕರು ಗಾಯಗೊಂಡಿದ್ದಾರೆ. ಪೊಲೀಸರು ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದರು. ಅಪಘಾತದಲ್ಲಿ ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಉನ್ನಾವೋದಲ್ಲಿ ನಾಲ್ವರು ಸಾವು: ಔರಸ್ ಪೊಲೀಸ್ ಠಾಣೆ ವ್ಯಾಪ್ತಿಯ ಲಖನೌ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಡಿಸಿಎಂಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಹಲವರ ಸ್ಥಿತಿ ಗಂಭೀರವಾಗಿದೆ. ಐವರನ್ನು ಉನ್ನಾವೋ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಒಬ್ಬರನ್ನು ಲಖನೌ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ. ಪೊಲೀಸರ ಪ್ರಕಾರ, ಬಸ್ ಗುಜರಾತ್‌ನ ರಾಜ್‌ಕೋಟ್‌ನಿಂದ ಯುಪಿಯ ಲಖಿಂಪುರ ಖೇರಿ ಜಿಲ್ಲೆಯ ಪಾಲಿಯಾಗೆ ಹೋಗುತ್ತಿತ್ತು. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಉತ್ತರ ಭಾರತದಲ್ಲಿ ದಾಖಲೆಯ ಚಳಿ, ದಟ್ಟ ಮಂಜಿಗೆ ಜನಜೀವನ ಅಸ್ತವ್ಯಸ್ತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.