ಅಮೃತಸರ: ನಗರದ ಕಥುನಂಗಲ್ನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ದರೋಡೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ, ಬೆಳಗ್ಗೆ 11 ಗಂಟೆ ಸುಮಾರಿಗೆ ಬ್ಯಾಂಕ್ ಒಳಗೆ ನುಗ್ಗಿರುವ ದರೋಡೆಕೋರರು ಸುಮಾರು 18 ಲಕ್ಷ ರೂಪಾಯಿ ದೋಚಿದ್ದಾರೆ ಎಂದು ಹೇಳಲಾಗುತ್ತಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಈ ಶಾಖೆಯು ಕಥುನಂಗಲ್ ಪೊಲೀಸ್ ಠಾಣೆಯಿಂದ ಕೇವಲ 300 ಮೀಟರ್ ದೂರದಲ್ಲಿದೆ. ಸುಮಾರು ಹತ್ತು ವರ್ಷಗಳಿಂದ ಈ ಬ್ಯಾಂಕ್ನಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಂಡಿಲ್ಲ ಎನ್ನುವುದು ಆಶ್ಚರ್ಯಕರ ಸಂಗತಿ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು, ಬ್ಯಾಂಕ್ ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಲಾಗುತ್ತಿದೆ.
ಇದನ್ನೂ ಓದಿ: ಚಾಕು ಹಿಡಿದು ದರೋಡೆಗೆ ಬಂದ ಕಿರಾತಕ.. ವೀರನಾರಿ ಮ್ಯಾನೇಜರ್ಗೆ ಹೆದರಿ ಕಳ್ಳ ಪರಾರಿ- ವಿಡಿಯೋ