ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕಗೊಂಡಿದ್ದಾರೆ.
2018ರಿಂದಲೂ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸೋಮನಾಥ್, ಈಗಾಗಲೇ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಿಮ್ ಸೆಂಟರ್ನ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.
ಚಂದ್ರಯಾನ-2, GSAT-9 ಯೋಜನೆ ಸೇರಿದಂತೆ ಅನೇಕ ಯೋಜನೆಗಳಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಸೋಮನಾಥ್ ಅವರನ್ನು ರಾಕೆಟ್ ವಿಜ್ಞಾನಿ ಎಂದು ಕರೆಯಲಾಗುತ್ತದೆ. ಕೊಲ್ಲಂನ ಟಿಕೆಂ ಕಾಲೇಜ್ ಆಫ್ ಇಂಜಿನಿಯರಿಂಗ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರಾಗಿರುವ ಇವರು, ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಿಂದ ಏರೋಸ್ಪೇಸ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.
-
S Somanath appointed as the new Secretary, Department of Space and Chairman, Space Commission
— All India Radio News (@airnewsalerts) January 12, 2022 " class="align-text-top noRightClick twitterSection" data="
#ISRO pic.twitter.com/TpzGvFUrV0
">S Somanath appointed as the new Secretary, Department of Space and Chairman, Space Commission
— All India Radio News (@airnewsalerts) January 12, 2022
#ISRO pic.twitter.com/TpzGvFUrV0S Somanath appointed as the new Secretary, Department of Space and Chairman, Space Commission
— All India Radio News (@airnewsalerts) January 12, 2022
#ISRO pic.twitter.com/TpzGvFUrV0
ಇಸ್ರೋ ನೂತನ ಅಧ್ಯಕ್ಷರಾಗಿ ಅಯ್ಕೆಯಾಗುತ್ತಿದ್ದಂತೆ ಈಟಿವಿ ಭಾರತ್ ಜೊತೆ ಮಾತನಾಡಿರುವ ಎಸ್. ಸೋಮನಾಥ್, ತಮ್ಮ ಮುಂದಿನ ಯೋಜನೆ, ಕಾರ್ಯ ವೈಖರಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.