ಬೆಂಗಳೂರು: ರೈಲ್ವೆ ಭದ್ರತಾ ಪಡೆಯಿಂದ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 2,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ. ಆಸಕ್ತ, ಅರ್ಹರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ರೈಲ್ವೆ ರಕ್ಷಣಾ ಪಡೆಯಲ್ಲಿ (ಆರ್ಪಿಎಫ್) ಕಾನ್ಸ್ಟೆಬಲ್- 2000 ಹುದ್ದೆಗಳು ಮತ್ತು ಸಬ್ ಇನ್ಸ್ಪೆಕ್ಟರ್ 250 ಹುದ್ದೆಗಳು)
ವಿದ್ಯಾರ್ಹತೆ: ಕಾನ್ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕಾನ್ಸ್ಟೆಬಲ್ ಹುದ್ದೆಗೆ ಕನಿಷ್ಟ 18 ಮತ್ತು ಗರಿಷ್ಠ 25 ವರ್ಷ. ಸಬ್ ಇನ್ಸ್ಪೆಕ್ಟರ್ ಕನಿಷ್ಠ 20ರಿಂದ ಗರಿಷ್ಠ 25 ವರ್ಷ ಪೂರ್ಣಗೊಂಡಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಕ್ಷಮತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ.
ಜನವರಿ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31 ಕಡೇಯ ದಿನಾಂಕ. ಈ ಕುರಿತು ಸಂಪೂರ್ಣ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಇನ್ನಿತರ ಮಾಹಿತಿಗೆ indianrailways.gov.in ಇಲ್ಲಿಗೆ ಭೇಟಿ ನೀಡಿ.
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೇಮಕಾತಿ: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಿಂದ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಎಂಸಿಎ, ಬಿಸಿಎ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 45 ವರ್ಷ ಮೀರಿರಬಾರದು. ಮಾಸಿಕ 25 ಸಾವಿರ ರೂ ವೇತನವಿದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆಯನ್ನು ವಿಸ್ತರಣೆ ಮಾಡಲಾಗುವುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 15. ಈ ಕುರಿತು ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು chikkamagaluru.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಅಪ್ರೆಂಟಿಸ್ ಹುದ್ದೆ; ಜ.11ಕ್ಕೆ ನೇರ ಸಂದರ್ಶನ