ETV Bharat / bharat

ರಾಮಮಂದಿರ ನಿರ್ಮಾಣಕ್ಕೆ ಭಾರಿ ಬೆಂಬಲ: ಹರಿದು ಬಂತು 2,100 ಕೋಟಿ ರೂ!

author img

By

Published : Feb 27, 2021, 9:56 PM IST

ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕಾಗಿ ಎಲ್ಲೆಡೆಯಿಂದ ದೇಣಿಗೆ ಹರಿದು ಬರುತ್ತಿದ್ದು, ಇಲ್ಲಿಯವರೆಗೆ 2,100 ಕೋಟಿ ರೂ. ಸಂಗ್ರಹವಾಗಿದೆ.

Swami Govind Dev Giri Maharaj
Swami Govind Dev Giri Maharaj

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಶ್ರೀರಾಮ ಮಂದಿರಕ್ಕೆ ದೇಶವ್ಯಾಪಿ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಇಲ್ಲಿಯವರೆಗೆ ಬರೋಬ್ಬರಿ 2,100 ಕೋಟಿ ರೂ. ಹರಿದು ಬಂದಿದೆ.

ರಾಮ ಮಂದಿರ ನಿರ್ಮಾಣಕ್ಕಾಗಿ ಹರಿದು ಬಂತು ಅಪಾರ ಹಣ

ಕಳೆದ 42 ದಿನಗಳಿಂದ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದ್ದು, ಇಲ್ಲಿಯವರೆಗೆ ಇಷ್ಟೊಂದು ಹಣ ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಸ್ವಾಮಿ ಗೋವಿಂದ್ ದೇವಗಿರಿ ಮಹಾರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: ₹16 ಕೋಟಿ ಬೆಲೆಯ ಚುಚ್ಚುಮದ್ದು ಸ್ವೀಕರಿಸಿತು ಕಂದಮ್ಮ!

ರಾಮ ಮಂದಿರ ನಿರ್ಮಾಣಕ್ಕಾಗಿ ಬಂದಿರುವ ಅನೇಕ ಚೆಕ್ ಇನ್ನು ಬ್ಯಾಂಕ್​ಗಳಲ್ಲಿ ಠೇವಣಿ ಮಾಡಬೇಕಾಗಿದ್ದು, ನಂತರದ ದಿನಗಳಲ್ಲಿ ಇದರ ಮಾಹಿತಿ ನೀಡಲಾಗುವುದು ಎಂದಿದ್ದಾರೆ. ಕಳೆದ ಆಗಸ್ಟ್​ 5ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮಾಡಿದ್ದಾರೆ. ಜನವರಿ 15ರಿಂದ ದೇಶಾದ್ಯಂತ ಮಂದಿರ ನಿರ್ಮಾಣಕ್ಕಾಗಿ ಹಣ ಸಂಗ್ರಹ ಕಾರ್ಯಕ್ರಮ ಆರಂಭಗೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.