ಲೋಕಸಭೆ: ಕೋವಿಡ್ ಲಸಿಕೆಗಾಗಿ ಕೇಂದ್ರ ಬಜೆಟ್ನಲ್ಲಿ 35 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ಸದ್ಯ 35 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಅಗತ್ಯ ಬಿದ್ದರೆ ಮೊತ್ತವನ್ನು ಇನ್ನೂ ಹೆಚ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ದೇಶದಲ್ಲಿ ಜನವರಿ 16ರಿಂದ ವ್ಯಾಕ್ಸಿನೇಷನ್ ಪ್ರಾರಂಭವಾಗಿದ್ದು, ಈವರೆಗೂ 50 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ದೇಶದಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ಆದರೂ ಜನತೆ ಕೋವಿಡ್ ನಿಯಮ ಅನುಸರಿಸಬೇಕಿದೆ ಎಂದು ಸಲಹೆ ನೀಡಿದರು.