ನವದೆಹಲಿ: ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಮಹಿಳಾ ಮೀಸಲಾತಿ ಮಸೂದೆಗೆ ಉಪ ರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಗುರುವಾರ ಸಹಿ ಹಾಕಿದ್ದಾರೆ. ಈ ತಿಂಗಳ ಆರಂಭದಲ್ಲಿ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುತೇಕ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿ ನೀಡಲು ಉದ್ದೇಶಿಸಿರುವ ಈ ಮಸೂದೆಯು ಮುಂದಿನ ಜನಗಣತಿಯಂತೆ ಅನುಷ್ಠಾನಗೊಳ್ಳುವ ಮೊದಲು ಸ್ವಲ್ಪ ಸಮಯ ತೆಗೆದುಕೊಳ್ಳಲಿದೆ. ಮಸೂದೆಯು ಕಾನೂನಾಗಿ 2029 ರಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ಜನಗಣತಿ ಪ್ರಕ್ರಿಯೆ ಹಾಗೂ ಕ್ಷೇತ್ರಗಳ ಪುನರ್ ವಿಂಗಡಣೆ ಕಾರ್ಯ ನಡೆದ ಬಳಿಕ ಮಹಿಳಾ ಮೀಸಲಾತಿ ಅನುಷ್ಠಾನವಾಗಲಿದೆ ಎಂದು ಸರ್ಕಾರ ಹೇಳಿದೆ.
ಇದನ್ನೂ ಓದಿ : ಮಹಿಳಾ ಮೀಸಲಾತಿ ನಾನು ನೀಡುತ್ತಿರುವ ಗ್ಯಾರಂಟಿ : ಗುಜರಾತ್ನಲ್ಲಿ ಪ್ರಧಾನಿ ಮೋದಿ ಘೋಷಣೆ
ಈ ಕುರಿತು ಸಾಮಾಜಿಕ ಜಾಲತಾಣ ಮಾಧ್ಯಮ ಎಕ್ಸ್ ಆ್ಯಪ್ನಲ್ಲಿ ಪೋಸ್ಟ್ ಮಾಡಿರುವ ಉಪಾಧ್ಯಕ್ಷ ಸೆಕ್ರೆಟರಿಯೇಟ್, 2023 ರ ಸಂಸತ್ತಿನ ಸದನಗಳು ಅಂಗೀಕರಿಸಿದಂತೆ ರಾಜ್ಯಸಭೆಯ ಗೌರವಾನ್ವಿತ ಅಧ್ಯಕ್ಷರಾದ ಜಗದೀಪ್ ಧನಕರ್ ಅವರು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳ ಒಪ್ಪಿಗೆಗೆ ಪ್ರಸ್ತುತಪಡಿಸಲು ಮಹಿಳಾ ಮೀಸಲಾತಿ ಮಸೂದೆಗೆ ಸಹಿ ಹಾಕಿದ್ದಾರೆ. ಭಾರತದ ಸಂವಿಧಾನದ 111 ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳಿಗೆ ಪ್ರಸ್ತುತಪಡಿಸಲಾಗುತ್ತದೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಧನಕರ್ ಅವರಿಂದ ಮಸೂದೆಯ ಸಹಿ ಪ್ರತಿಯನ್ನು ಸ್ವೀಕರಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : 2024 ರ ಲೋಕಸಭೆ ಚುನಾವಣೆ ಮುಗಿದ ತಕ್ಷಣವೇ ಜನಗಣತಿ , ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ: ಅಮಿತ್ ಶಾ
ಮಹಿಳಾ ಮೀಸಲಾತಿ ಮಸೂದೆ 2023 ಅಥವಾ ನಾರಿ ಶಕ್ತಿ ವಂದನಾ ಅಧಿನಿಯಮವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಒದಗಿಸಲಿದೆ. ರಾಷ್ಟ್ರಪತಿಗಳು ಇದಕ್ಕೆ ಒಪ್ಪಿಗೆ ನೀಡಿದ ನಂತರ ಕಾನೂನಾಗಿ ರೂಪುಗೊಳ್ಳಲಿದೆ.
ಇದನ್ನೂ ಓದಿ : ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ .. ಎಲ್ಲ 215 ಸಂಸದರಿಂದ ಪರವಾಗಿ ಮತ ಚಲಾವಣೆ