ಆಲಪ್ಪುಳ (ಕೇರಳ): ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿರುವ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಯಕರ್ತನನ್ನು ನಂದು ಎಂದು ಗುರುತಿಸಲಾಗಿದೆ. ಯಾವುದೋ ವಿಚಾರಕ್ಕಾಗಿ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಆರ್‌ಎಸ್‌ಎಸ್ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ನಡುವೆ ಆರಂಭವಾದ ಜಗಳ ಕಾರ್ಯಕರ್ತನ ಸಾವಿನಲ್ಲಿ ಅಂತ್ಯವಾಗಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಓದಿ: ಕೇರಳ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಟ: ರಾಹುಲ್ ಗಾಂಧಿ ಸಂಭ್ರಮ ನೋಡಿ
ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಖಂಡನೆ ವ್ಯಕ್ತಪಡಿಸಿದ್ದು, ಇದರ ಹಿಂದೆ ಪಿಎಫ್‌ಐ ಕೈವಾಡವಿದೆ ಎಂದು ಆರೋಪಿಸಿದ್ದಾರೆ.