ಆಂಧ್ರ ಪ್ರದೇಶ (ಪಶ್ಚಿಮ ಗೋದಾವರಿ) : ಆರ್‌ಟಿಸಿ ಬಸ್ ಸೇತುವೆಯಿಂದ ನದಿಗೆ ಉರುಳಿ ಬಿದ್ದ ಪರಿಣಾಮ 9 ಜನ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರು ಎಂಬಲ್ಲಿ ಬಸ್ ನದಿಗೆ ಉರುಳಿದ್ದು ಹಲವರು ಗಾಯಗೊಂಡಿದ್ದಾರೆ.
![RTC BUS CRASHED INTO A RIVER AT JANGAREDDYGUDEM OF WEST GODAVARI DISTRICT](https://etvbharatimages.akamaized.net/etvbharat/prod-images/13911629_bus_1512newsroom_1639555358_192.jpg)
ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ವೇಲೇರುಪಾಡು ಕಡೆಯಿಂದ ಜಂಗಾರೆಡ್ಡಿಗುಡೆಂಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೇಲ್ನೋಟಕ್ಕೆ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಆದರೆ, ಅಫಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬಸ್ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. 25 ಅಡಿ ಆಳದ ಕಂದರಕ್ಕೆ ಬಿದ್ದಿದ್ದರಿಂದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.
ಇದನ್ನೂ ಓದಿ: Army chopper crash case: ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ