ETV Bharat / bharat

RTI: ಸಿಐಸಿ ಆದೇಶ ಆಧರಿಸಿ ಪಕ್ಷಗಳನ್ನು ಆರ್​ಟಿಐ ವ್ಯಾಪ್ತಿಗೆ ತರಲಾಗದು: ಸುಪ್ರೀಂ ಕೋರ್ಟ್​ಗೆ ಕೇಂದ್ರ - ರಾಜಕೀಯ ಪಕ್ಷಗಳನ್ನು ಆರ್‌ಟಿಐ ಅಡಿಯಲ್ಲಿ ತರಲು

RTI : ಮಾಹಿತಿ ಆಯೋಗದ ಆದೇಶವನ್ನೇ ಆಧಾರವಾಗಿಟ್ಟುಕೊಂಡು ರಾಜಕೀಯ ಪಕ್ಷಗಳನ್ನು ಆರ್​ಟಿಐ ವ್ಯಾಪ್ತಿಗೆ ತರುವಂತೆ ಕೋರುವಂತಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತನ್ನ ನಿಲುವು ತಿಳಿಸಿದೆ.

political parties under RTI
political parties under RTI
author img

By

Published : Jul 26, 2023, 2:53 PM IST

ನವದೆಹಲಿ : ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ಆಧಾರವಾಗಿಟ್ಟುಕೊಂಡು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯ ವ್ಯಾಪ್ತಿಗೆ ತರುವಂತೆ ಸುಪ್ರೀಂ ಕೋರ್ಟ್​ನಲ್ಲಿ ಕೇಳುವಂತಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ರಾಜಕೀಯ ಪಕ್ಷಗಳನ್ನು ಆರ್​​ಟಿಐ ಕಾನೂನಿನಡಿ ತರುವಂತೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಷಯ ತಿಳಿಸಿದರು.

ರಾಜಕೀಯ ಪಕ್ಷಗಳನ್ನು ಆರ್‌ಟಿಐ ಅಡಿಯಲ್ಲಿ ತರಲು ರಿಟ್ ಆಫ್ ಮ್ಯಾಂಡಮಸ್ (ಅಧಿಕೃತ ಕರ್ತವ್ಯಗಳನ್ನು ಪೂರೈಸಲು ಸರ್ಕಾರಕ್ಕೆ ನ್ಯಾಯಾಂಗದ ಆದೇಶ) ಕೋರಲು ಸಿಐಸಿ ಆದೇಶ ಬಳಸುವಂತಿಲ್ಲ ಎಂದು ತುಷಾರ್ ಮೆಹ್ತಾ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು. ಏತನ್ಮಧ್ಯೆ, ಆರ್ಥಿಕ ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ಆರ್​ಟಿಐ ವ್ಯಾಪ್ತಿಗೆ ಒಳಪಡಲು ತಮ್ಮ ಪಕ್ಷಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಕ್ಷವನ್ನು ಪ್ರತಿನಿಧಿಸುತ್ತಿರುವ ವಕೀಲ ಪಿ ವಿ ದಿನೇಶ್ ಹೇಳಿದರು.

ಪ್ರಕರಣದಲ್ಲಿ ಅರ್ಜಿದಾರನಾಗಿರುವ ಎನ್‌ಜಿಒ ಒಂದರ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ರಾಜಕೀಯ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ತೆರಿಗೆ ವಿನಾಯಿತಿ ಮತ್ತು ಸರ್ಕಾರದಿಂದ ಭೂಮಿ ಮುಂತಾದ ಪ್ರಯೋಜನಗಳನ್ನು ಪಡೆಯುವ ರಾಜಕೀಯ ಪಕ್ಷಗಳನ್ನು ಆರ್‌ಟಿಐ ಅಡಿ ತರಲು ಸಿಐಸಿ 2013 ರಲ್ಲಿ ಆದೇಶವನ್ನು ಹೊರಡಿಸಿದೆ ಎಂದು ತಿಳಿಸಿದರು.

ಎನ್‌ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ವಕೀಲೆ ಅಶ್ವಿನಿ ಉಪಧ್ಯಾಯ ಅವರು ಸಲ್ಲಿಸಿದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯವು ಆಗಸ್ಟ್ 1 ಕ್ಕೆ ಮುಂದೂಡಿತು. ಪ್ರಕರಣವನ್ನು ನಿರ್ವಹಿಸುತ್ತಿರುವ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಪ್ರಯಾಣದಲ್ಲಿರುವುದರಿಂದ ಅವರು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ ನಂತರ ವಿಚಾರಣೆಯನ್ನು ಮುಂದೂಡಲಾಯಿತು.

ಈ ಹಿಂದೆ, ಉನ್ನತ ನ್ಯಾಯಾಲಯವು ಚುನಾವಣಾ ಬಾಂಡ್ ಯೋಜನೆ 2018 ಅನ್ನು ಪ್ರಶ್ನಿಸುವ ಪಿಐಎಲ್‌ಗಳನ್ನು, ರಾಜಕೀಯ ಪಕ್ಷಗಳನ್ನು ಆರ್‌ಟಿಐ ಕಾಯ್ದೆಯ ವ್ಯಾಪ್ತಿಯಲ್ಲಿ ತರಲು ಒತ್ತಾಯಿಸುವ ಎರಡು ಪಿಐಎಲ್‌ಗಳಿಂದ ಪ್ರತ್ಯೇಕಿಸಿತ್ತು. ರಾಜಕೀಯ ಪಕ್ಷಗಳನ್ನು ಆರ್‌ಟಿಐ ಅಡಿ ತರುವುದರಿಂದ ಅವುಗಳನ್ನು ಹೊಣೆಗಾರರನ್ನಾಗಿ ಮಾಡಬಹುದು ಚುನಾವಣೆಯಲ್ಲಿ ಕಪ್ಪು ಹಣದ ಬಳಕೆ ತಡೆಯಲು ಸಹಾಯಕವಾಗಲಿದೆ ಎಂದು ಉಪಾಧ್ಯಾಯ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಭ್ರಷ್ಟಾಚಾರ ಮತ್ತು ಕೋಮುವಾದದ ಭೀತಿಯನ್ನು ಎದುರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. "ಜನಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 29 ಎ ಅಡಿ ನೋಂದಾಯಿಸಲಾದ ರಾಜಕೀಯ ಪಕ್ಷಗಳನ್ನು, ಮಾಹಿತಿ ಹಕ್ಕು ಕಾಯಿದೆ, 2005 ರ ಸೆಕ್ಷನ್ 2 (ಎಚ್) ಅಡಿ 'ಸಾರ್ವಜನಿಕ ಪ್ರಾಧಿಕಾರ' ಎಂದು ಘೋಷಿಸಿ, ಅವುಗಳನ್ನು ಪಾರದರ್ಶಕ ಮತ್ತು ಜನರಿಗೆ ಉತ್ತರದಾಯಿಯನ್ನಾಗಿ ಮಾಡಬೇಕು'' ಎಂದು ಅದು ಹೇಳಿದೆ.

ಇದನ್ನೂ ಓದಿ : External Debt: ಭಾರತದ ಒಟ್ಟು ಬಾಹ್ಯ ಸಾಲದ ಮೊತ್ತ $624 ಬಿಲಿಯನ್: ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.