ಗಯಾ (ಬಿಹಾರ): ಇಲ್ಲಿನ ಸಹಕಾರ ಸಚಿವ ಸುರೇಂದ್ರ ಪ್ರಸಾದ್ ಯಾದವ್ ಅವರ ಹತ್ಯೆ ಮಾಡಿದವರಿಗೆ 11 ಕೋಟಿ ರೂ.ಗಳ ಬಹುಮಾನವನ್ನು ನೀಡುವುದಾಗಿ ಬರೆಯಲಾಗಿರುವ ಪೋಸ್ಟ್ವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪ್ರಕರಣ ನಡೆದಿದೆ. ಈ ಬೆದರಿಕೆ ಪೋಸ್ಟ್ ಗಮನಿಸಿದ ಸಹಕಾರ ಸಚಿವರು ಗಯಾದ ರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಐಟಿ ಕಾಯ್ದೆಯ ಸೆಕ್ಷನ್ 115 ಮತ್ತು 120ಬಿ ಅಡಿ ರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಸುರೇಂದ್ರ ಪ್ರಸಾದ್ ಯಾದವ್ ಈ ಕುರಿತು ಗಯಾದ ಪೊಲೀಸ್ ವರಿಷ್ಠಾಧಿಕಾರಿಗೆಗೆ ನನ್ನ ಜೀವ ಮತ್ತು ಆಸ್ತಿ ರಕ್ಷಿಣೆ ಮಾಡುವಂತೆ ಕೋರಿ ಪತ್ರ ಬರೆದಿದ್ದಾರೆ.
ಅವರು ಎಸ್ಪಿಗೆ ಬರೆದ ಪತ್ರದಲ್ಲಿ ನನ್ನನ್ನು ಕೊಲ್ಲುವವರಿಗೆ 11ಕೋಟಿ ರೂ.ಗಳ ಬಹುಮಾನವನ್ನು ನೀಡಲಾಗುವುದು ಎಂದು ಬರೆದಿರುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಪಾಟ್ನಾದ ಧನ್ವಂತ್ ಸಿಂಗ್ ರಾಥೋಡ್ ಎಂಬ ವ್ಯಕ್ತಿ ಈ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದಾಗಿ ಪತ್ತೆ ಹಚ್ಚಿದ್ದೇವೆ. ಇತನ ಜೊತೆಗೆ ಮತ್ಯಾರಿದ್ದಾರೆ ಎಂದು ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪೊಲೀಸರು ಹೇಳುವುದಿಷ್ಟು: ಕ್ಷತ್ರಿಯ ಸೇವಾ ಮಹಾಸಂಘದ ರಾಷ್ಟ್ರೀಯ ಅಧ್ಯಕ್ಷನಾಗಿರುವ ಧನ್ವಂತ್ ಸಿಂಗ್ ರಾಥೋಡ್ ತಮ್ಮ ಪೋಸ್ಟ್ ನಲ್ಲಿ ಸುರೇಂದ್ರ ಪ್ರಸಾದ್ ಯಾದವ್ ಹತ್ಯೆ ಮಾಡಿದವರಿಗೆ 11 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಬರೆದುಕೊಂಡಿದ್ದಾರೆ. ಈ ಕುರಿತು ರಾಂಪುರ ಪೊಲೀಸ್ ಠಾಣಾಧಿಕಾರಿ ರವಿಕುಮಾರ್ ಮಾತನಾಡಿ, "ಸಚಿವರ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ. ಪಾಟ್ನಾ ನಿವಾಸಿ ಧನ್ವಂತ್ ಸಿಂಗ್ ರಾಥೋಡ್ ಈ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈತ ಕ್ಷತ್ರಿಯ ಸಮಾಜದ ನಾಯಕನೆಂದು ತಿಳಿದುಬಂದಿದೆ. ಧನ್ವಂತ್ ಸಿಂಗ್ ಈ ಹಿಂದೆ ಜೈಲಿಗೆ ಹೋಗಿದ್ದರು. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೆವೆ ಎಂದು ತಿಳಿಸಿದ್ದಾರೆ.
ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ: ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗೂ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ ವಿಕೃತಿ ಮೇರೆದಿರುವ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶ ಸಹ ವ್ಯಕ್ತವಾಗಿದೆ. ಆರೋಪಿಯು ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದಾನೆ ಎಂದು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳು ಆರೋಪ ಮಾಡಿವೆ.ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಸೌದಿಯಲ್ಲಿ ಗಂಡ.. ಪಬ್ಜಿ ಗೇಮ್ ಪ್ರಿಯಕರನಿಗಾಗಿ ನಿವೇಶನ ಮಾರಿ ಭಾರತಕ್ಕೆ ಬಂದ ಪಾಕ್ ಮಹಿಳೆ ಪೊಲೀಸರ ಅತಿಥಿ!