ETV Bharat / bharat

ರಷ್ಯಾ-ಉಕ್ರೇನ್ ಸಂಘರ್ಷ.. ಭಾರತ ಎಂದಿಗೂ ಯಾವುದೇ ದೇಶದ ಮೇಲೆ ದಾಳಿ ನಡೆಸಿಲ್ಲ ಎಂದ ರಾಜನಾಥ್ ಸಿಂಗ್!

ಅಯೋಧ್ಯೆ, ಸುಲ್ತಾನ್‌ಪುರ, ಚಿತ್ರಕೂಟ, ಪ್ರತಾಪ್‌ಗಢ, ಕೌಶಂಬಿ, ಪ್ರಯಾಗರಾಜ್, ಬಾರಾಬಕಿ, ಬಹ್ರೈಚ್, ಶ್ರಾವಸ್ತಿ, ಗೊಂಡಾ, ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಮತದಾನ ನಡೆಯುತ್ತಿದೆ. ಐದನೇ ಹಂತದಲ್ಲಿ 692 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಚುನಾವಣಾ ಭವಿಷ್ಯವನ್ನು ಸುಮಾರು 2.24 ಕೋಟಿ ಮತದಾರರು ನಿರ್ಧರಿಸಲಿದ್ದಾರೆ..

ರಷ್ಯಾ ಮತ್ತು ಉಕ್ರೇನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ

author img

By

Published : Feb 27, 2022, 4:36 PM IST

ಬೈರಿಯಾ (ಉತ್ತರಪ್ರದೇಶ​) : ರಷ್ಯಾ ಮತ್ತು ಉಕ್ರೇನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಮುಖ ಹೇಳಿಕೆ ನೀಡಿದ್ದಾರೆ.

ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಮತ್ತು ವಿಶ್ವದಲ್ಲಿ ಶಾಂತಿಯನ್ನು ಸಾಧಿಸಲು ಈ ತತ್ವವನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಉತ್ತರಪ್ರದೇಶದ ಬೈರಿಯಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಈ ರೀತಿ ಮಾತನಾಡಿದ್ದಾರೆ. ಉಕ್ರೇನ್-ರಷ್ಯಾ ಸಂಘರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ಶ್ಲಾಘಿಸಿದ ಅವರು, ದೇಶವು ಶಾಂತಿ ನೆಲೆಸಬೇಕೆಂದು ಬಯಸುತ್ತದೆ ಎಂದರು.

ಉಕ್ರೇನ್‌ನಲ್ಲಿ ಶಾಂತಿ ನೆಲೆಸಬೇಕೆಂದು ನಾವು ಬಯಸುತ್ತೇವೆ. ಪ್ರಧಾನಿ ಮೋದಿ ಅವರ ಪಾತ್ರವನ್ನು ಪ್ರಶಂಸಿಸಲು ಪದಗಳು ಸಾಕಾಗುವುದಿಲ್ಲ ಎಂದರು.

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ಹೋಳಿ ಮತ್ತು ದೀಪಾವಳಿಯಂದು ಜನರಿಗೆ ಗ್ಯಾಸ್ ಸಿಲಿಂಡರ್ ಅನ್ನು ಉಚಿತವಾಗಿ ನೀಡಲಿದೆ ಎಂದು ಸಚಿವರು ಇದೇ ವೇಳೆ ಹೇಳಿದರು.

ಇದನ್ನೂ ಓದಿ: ಮೆರವಣಿಗೆಯಲ್ಲಿ ಸಖತ್ ಸ್ಟೆಪ್ ಹಾಕಿದ ಸಂಸದ ಸಂಗಣ್ಣ ಕರಡಿ.. ವಿಡಿಯೋ

ಅಯೋಧ್ಯೆ, ಸುಲ್ತಾನ್‌ಪುರ, ಚಿತ್ರಕೂಟ, ಪ್ರತಾಪ್‌ಗಢ, ಕೌಶಂಬಿ, ಪ್ರಯಾಗರಾಜ್, ಬಾರಾಬಕಿ, ಬಹ್ರೈಚ್, ಶ್ರಾವಸ್ತಿ, ಗೊಂಡಾ, ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಮತದಾನ ನಡೆಯುತ್ತಿದೆ. ಐದನೇ ಹಂತದಲ್ಲಿ 692 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಚುನಾವಣಾ ಭವಿಷ್ಯವನ್ನು ಸುಮಾರು 2.24 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

ಇಂದು ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ. ಏಳು ಹಂತದ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ಹಂತಗಳ ಮತದಾನ ಈಗಾಗಲೇ ಮುಕ್ತಾಯಗೊಂಡಿದ್ದು, ಇಂದು ಐದನೇ ಹಂತದ ಮತದಾನ ನಡೆಯುತ್ತಿದೆ.

ಉಳಿದ ಎರಡು ಹಂತಗಳಿಗೆ ಮಾರ್ಚ್ 3 ಮತ್ತು ಮಾರ್ಚ್ 7ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.