ETV Bharat / bharat

ನೂತನ ಸಂಸತ್ ಭವನ ಉದ್ಘಾಟನೆ ಸಂಘರ್ಷದ ವಿಷಯವಾಗಬಾರದು: ಎಸ್.ಜೈಶಂಕರ್

author img

By

Published : May 26, 2023, 1:46 PM IST

ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನ ಉದ್ಘಾಟನೆ ಮಾಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.

s jaishankar
ಎಸ್ ಜೈಶಂಕರ್

ಗುಜರಾತ್ : ಸಂಸತ್ತಿನ ನೂತನ ಕಟ್ಟಡ ಉದ್ಘಾಟನೆ ಪ್ರಜಾಪ್ರಭುತ್ವದ ಹಬ್ಬ. ಇದು ಸಂಘರ್ಷದ ವಿಷಯವಾಗಬಾರದು. ಕೆಲ ವಿಚಾರಗಳಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು, ನಾವೆಲ್ಲರೂ ಒಟ್ಟಾಗಿ ಹೊಸ ಸಂಸತ್ ಭವನ ಉದ್ಘಾಟನೆಯನ್ನು ಆಚರಿಸಬೇಕೆಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್ ಜೈಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಟಿಲಕವಾಡ ತಾಲೂಕಿನ ವ್ಯಾಧರ್ ಗ್ರಾಮದಲ್ಲಿ ಸ್ಮಾರ್ಟ್ ಅಂಗನವಾಡಿ ಕೇಂದ್ರಕ್ಕೆ ಭೂಮಿ ಪೂಜೆ ನೆರವೇರಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಆದರೆ ಈ ರಾಜಕೀಯ ಮಾಡುವುದು ಸೂಕ್ತವಲ್ಲ ಎಂದರು.

  • #WATCH | The inauguration of the new building of Parliament is a festival of democracy. This should not become an issue of conflict. There is a limit to politicising anything. I think we should all celebrate it together: EAM Dr S Jaishankar in Vyadhar, Narmada pic.twitter.com/3Ta6rkNGOR

    — ANI (@ANI) May 26, 2023 " class="align-text-top noRightClick twitterSection" data=" ">

ಅಮಿತ್​ ಶಾ ಹೇಳಿದ್ದೇನು? : ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಆದರೆ, ರಾಷ್ಟ್ರಪತಿಗಳೇ ಉದ್ಘಾಟನೆ ಮಾಡಲಿ ಎಂಬ ನೆಪವೊಡ್ಡಿ ಕಾಂಗ್ರೆಸ್ ಪಕ್ಷ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸುವ ಮೂಲಕ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್​ನ ನಕಾರಾತ್ಮಕ ಧೋರಣೆ ಖಂಡನೀಯ. ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಆಯಾ ರಾಜ್ಯಪಾಲರ ಬದಲಿಗೆ ಆಯಾ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರಿಂದ ಹೊಸ ವಿಧಾನಸಭಾ ಕಟ್ಟಡಗಳಿಗೆ ಶಂಕುಸ್ಥಾಪನೆ ಮಾಡಿದ ಉದಾಹರಣೆಗಳಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಮೋದಿ ನಾಯಕತ್ವದಿಂದಾಗಿ ಜಗತ್ತು ಇಂದು ನವ ಭಾರತವನ್ನು ನೋಡುತ್ತಿದೆ: ವಿದೇಶಾಂಗ ಸಚಿವ ಜೈಶಂಕರ್

ಗೋವಾ ಸಚಿವ ಸುದಿನ್ ಧವಲಿಕರ್ ಅಭಿಪ್ರಾಯ: ಮೇ 28 ರಂದು ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. ಇಡೀ ಎಂಜಿಪಿ ಪಕ್ಷದ ಪರವಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಇಂದಿರಾಗಾಂಧಿ ಅವರು ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದಾಗ ಯಾರೂ ಏನನ್ನೂ ಹೇಳಲಿಲ್ಲ, ಈಗ ವಿರೋಧ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳ ಹೇಳಿಕೆಗಳನ್ನು ನಾನು ಖಂಡಿಸುತ್ತೇನೆ ಎಂದು ಗೋವಾ ಸಚಿವ ಸುದಿನ್ ಧವಲಿಕರ್ ಹೇಳಿದ್ದಾರೆ.

ಇದನ್ನೂ ಓದಿ : ಮುಂಬರುವ ಲೋಕಸಭೆ ಚುನಾವಣೆ ಕುರಿತು ಈ ಭವಿಷ್ಯ ನುಡಿದ ಅಮಿತ್​ ಶಾ!

ಇನ್ನು ಲೋಕಸಭೆ ಸ್ಪೀಕರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಇದನ್ನು ಸುಮಾರು 20 ವಿರೋಧ ಪಕ್ಷಗಳು ಖಂಡಿಸಿದ್ದು, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಇನ್ನೊಂದೆಡೆ, ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಹೇಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.