ಜೈಪುರ(ರಾಜಸ್ಥಾನ): ನಮ್ಮ ಹೋರಾಟ ಏನಿದ್ದರೂ ಬಿಜೆಪಿ ವಿರುದ್ಧ. ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಪ್ರತಿಭಟನೆಗೆ ಇಳಿದ ಕಾರಣದಿಂದಾಗಿ ಕೃಷಿ ಕಾನೂನುಗಳನ್ನು(Repeal of Farm laws) ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಹಿಂತೆಗೆದುಕೊಳ್ಳಬೇಕಾಯಿತು ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ (Sachin Pilot) ಹೇಳಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲಾ ನಾಯಕರ ಅಭಿಪ್ರಾಯ ಪಡೆದು ಸಚಿವ ಸಂಪುಟ ಪುನಾರಚನೆ (Cabinet Reshuffle) ಮಾಡಲಾಗುತ್ತಿದೆ. ಎಲ್ಲಾ ವರ್ಗಗಳೊಂದಿಗೆ ಕಾಂಗ್ರೆಸ್ ಪಕ್ಷ ಕೆಲಸ ಮಾಡುತ್ತಿದೆ. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುತ್ತಿಲ್ಲ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.
ಕಾಂಗ್ರೆಸ್ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಚಿನ್ ಪೈಲಟ್ 'ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ, ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಕಾಂಗ್ರೆಸ್ ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ' ಎಂದು ಸಚಿನ್ ಪೈಲಟ್ ಹೇಳಿದ್ದಾರೆ.
ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರ (Rajasthan Government) ಕ್ಯಾಬಿನೆಟ್ ಪುನರ್ರಚನೆಗೆ ನಿರ್ಧಾರ ಮಾಡಿದ್ದು, ಈಗಾಗಲೇ ಎಲ್ಲಾ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇಂದು ಸಂಜೆ 4 ಗಂಟೆಗೆ 15 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ: ಅಗತ್ಯಬಿದ್ದರೆ ಮತ್ತೆ ಕೃಷಿ ಸಂಬಂಧಿ ಕಾನೂನು ಜಾರಿ: ರಾಜಸ್ಥಾನ ರಾಜ್ಯಪಾಲ