ಮುಂಬೈ: ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಆರ್ಥರ್ ರಸ್ತೆ ಜೈಲು ಸೇರಿ ಬಾಂಬೆ ಹೈಕೋರ್ಟ್‌ನಿಂದ ಜಾಮೀನು ಪಡೆದಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಇಂದು ಜೈಲಿನಿಂದ ಬಿಡುಗಡೆಯಾಗಿ ಮನೆ ಸೇರಿದ್ದಾರೆ.
ಇಂದು ಬೆಳಗ್ಗೆ ಜೈಲಿನ ಪ್ರಕ್ರಿಯೆ ಪ್ರಕಾರ ಆರ್ಯನ್ ಖಾನ್ ಬಿಡುಗಡೆ ಮಾಡಲಾಯಿತು. ಜೈಲಿನಿಂದ ಹೊರ ಬಂದ ಆರ್ಯನ್ ಖಾನ್ ನೇರ ಮನೆ ಸೇರಿದರು. ಇದಾದ ಸ್ವಲ್ಪ ಸಮಯದ ಬಳಿಕ ಸಾಧುವೊಬ್ಬರು ಶಾರೂಖ್ ಖಾನ್ ಮನೆಯ ಮುಂಭಾಗ ಹನುಮಾನ್ ಚಾಲೀಸ್ ಪಠಿಸಿದರು.
ಸಾಧು ಅವರು ಹನುಮಾನ್ ಚಾಲೀಸ್ ಪಠಿಸುವ ಮುಖ್ಯ ಉದ್ದೇಶ, ಶಾರೂಖ್ ಮನೆಗೆ ಹಿಡಿದಿರುವ ಶನಿ ಬಿಟ್ಟು ಹೋಗಲಿ. ಅವರೆಲ್ಲರೂ ಸುಖವಾಗಿ ಬಾಳಲಿ ಎಂದು ತಿಳಿದು ಬಂದಿದೆ. ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ಡ್ರಗ್ ದಾಳಿಯ ಸಂದರ್ಭದಲ್ಲಿ ಆರ್ಯನ್ ಖಾನ್ ಅವರನ್ನು ಎನ್‌ಸಿಬಿ ಅಧಿಕಾರಿಗಳು ಅಕ್ಟೋಬರ್ 2 ರಂದು ಬಂಧಿಸಿದ್ದರು. ಅಕ್ಟೋಬರ್ 8 ರಿಂದ ಅರ್ಥರ್ ಜೈಲಿನಲ್ಲಿರುವ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಸಾಂಬ್ರೆ ಅವರಿದ್ದ ಏಕ ಸದಸ್ಯ ಪೀಠವು ಜಾಮೀನು ಮಂಜೂರು ಮಾಡಿತ್ತು.