ನವದೆಹಲಿ : ಯುವ ಕುಸ್ತಿಪಟು ಸಾಗರ್ ಧಂಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೊಂಡಿದೆ. ಮುಂದಿನ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಇಂದು ವಿಚಾರಣೆ ನಡೆಸಿರುವ ದೆಹಲಿ ಕೋರ್ಟ್ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಆತನ ಸಹಚರ ಅಜಯ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿರುವ ಆದೇಶ ಹೊರ ಹಾಕಿದೆ. ಈ ಹಿಂದೆ ಜೂನ್ 25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರ ಹಾಕಿತ್ತು.
ಇದನ್ನೂ ಓದಿರಿ: ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು : ಮಾತುಕತೆ ಮುಂದುವರೆಸಿರುವ ರಾಹುಲ್ ಗಾಂಧಿ!
ಮೇ 4ರಂದು ದೆಹಲಿಯ ಛತ್ರಸಾಲ ಸ್ಟೇಡಿಯಂನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಕುಸ್ತಿಪಟು ಸಾಗರ್ ರಾಣಾ ಧಂಕರ್ ಹಲ್ಲೆಗೊಳಗಾಗಿ ಮೃತಪಟ್ಟಿದ್ದರು. ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿದ್ದಂತೆಯೇ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಪರಾರಿಯಾಗಿದ್ದರು. ಬಳಿಕ ಇವರನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದರು. ದೆಹಲಿ ನ್ಯಾಯಾಲಯವು ಸುಶೀಲ್‌ಕುಮಾರ್, ಅವರ ಸ್ನೇಹಿತ ಅಜಯ್ ಕುಮಾರ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು.