ETV Bharat / bharat

ಬಾಬಾ ಸೀತಾರಾಮ್ & ಸಹಚರರಿಂದ ಬಾಲಕಿ ಮೇಲೆ ಅತ್ಯಾಚಾರ : ಓರ್ವನ ಬಂಧನ! - ಬಾಲಕಿ ಮೇಲೆ ಅತ್ಯಾಚಾರ ಬಾಬಾ ಸೀತಾರಾಮ್ ಸಹಚರನ ಬಂಧನ

ಬಾಬಾನ ಕಪಿಮುಷ್ಠಿಯಿಂದ ಪಾರಾದ ಬಳಿಕ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ತಕ್ಷಣ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ಸದ್ಯ ಪ್ರಕರಣ ಪ್ರಮುಖ ಆರೋಪಿ ಸಂತ ಸೀತಾರಾಮ್ ಹಾಗೂ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ..

Baba Sitaram Das
ಬಾಬಾ ಸೀತಾರಾಮ್
author img

By

Published : Mar 30, 2022, 2:47 PM IST

ರೇವಾ : ಮಧ್ಯಪ್ರದೇಶದ ರೇವಾ ಜಿಲ್ಲೆಯ ಸರ್ಕಾರಿ ಕಟ್ಟಡವಾದ ರಾಜ್ ನಿವಾಸ್‌ನಲ್ಲಿ ಸ್ವಯಂ ಘೋಷಿತ ಬಾಬಾ ಸೀತಾರಾಮ್ ದಾಸ್ ಹಾಗೂ ಆತನ ಸಹಚರರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆ ಬಳಿಕ ಪ್ರಮುಖ ಆರೋಪಿ ಸೀತಾರಾಮ್ ದಾಸ್ ಮಹಾರಾಜ್ ಅಲಿಯಾಸ್ ಸಮರ್ಥ ತ್ರಿಪಾಠಿ ತಲೆಮರೆಸಿಕೊಂಡಿದ್ದು, ಆತನ ಸಹಚರನೋರ್ವನನ್ನು ಬಂಧಿಸಲಾಗಿದೆ.

ರೇವಾದ ಬಾಲಕಿಯರ ಸರ್ಕಾರಿ ಪದವಿ ಕಾಲೇಜಿನ (ಜಿಡಿಸಿ) ವಿದ್ಯಾರ್ಥಿನಿಯಾಗಿದ್ದ ಸಂತ್ರಸ್ತೆಯನ್ನು ಆಕೆಯ ಸ್ನೇಹಿತ ವಿನೋದ್ ಪಾಂಡೆ ಎಂಬಾತ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಹಾಯ ಮಾಡುತ್ತಾರೆ ಎಂದು ಹೇಳಿ ರಾಜ್ ನಿವಾಸಕ್ಕೆ ಕರೆದೊಯ್ದಿದ್ದಾರೆ. ನಂತರ ಅಲ್ಲಿ ತನ್ನ ಸಹಚರರೊಂದಿಗೆ ಬಲವಂತವಾಗಿ ಮದ್ಯ ಕುಡಿಸಿ ಸೀತಾರಾಮ್ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗ್ತಿದೆ.

ಬಳಿಕ ಬಾಬಾನ ಕಪಿಮುಷ್ಠಿಯಿಂದ ಪಾರಾದ ಬಳಿಕ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ತಕ್ಷಣ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ಸದ್ಯ ಪ್ರಕರಣ ಪ್ರಮುಖ ಆರೋಪಿ ಸಂತ ಸೀತಾರಾಮ್ ಹಾಗೂ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಕವಿತಾ ಪಾಂಡೆ ಪ್ರತಿಕ್ರಿಯಿಸಿದ್ದು, ಈ ಘಟನೆ ಅತ್ಯಂತ ನಾಚಿಕೆಗೇಡಿನ ಸಂಗತಿ. ಅಪ್ರಾಪ್ತ ಬಾಲಕಿಗೆ ನ್ಯಾಯ ಸಿಗಬೇಕು. ಅಲ್ಲದೇ ಈ ಪ್ರಕರಣ ಬಗ್ಗೆ ಸಿಐಡಿ ತನಿಖೆ ನಡೆಸಿ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.