ನವದೆಹಲಿ: ಇಡೀ ದೇಶವವನ್ನೇ ಬೆಚ್ಚಿಬೀಳಿಸಿದ್ದ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ನಡೆದಿದ್ದ ಶ್ರದ್ಧಾ ಹತ್ಯೆ ಪ್ರಕರಣ ಕೋರ್ಟ್ನಲ್ಲಿದೆ. ಈ ಕೇಸ್ನ ಆರೋಪಿ ಅಫ್ತಾಬ್ ಪೂನಾವಾಲಾ ವಿರುದ್ಧ ದೋಷಾರೋಪದ ಕುರಿತು ಇಂದಿಗೂ ಒಂದು ನಿರ್ಧಾರವನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ನ್ಯಾಯಾಧೀಶರು ರಜೆಯಲ್ಲಿರುವುದರಿಂದ ತೀರ್ಪನ್ನು ಮುಂದೂಡಲಾಗಿದೆ. ಮೇ 9ರಂದು ಈ ಬಗ್ಗೆ ತೀರ್ಪು ಬರುವ ಸಾಧ್ಯತೆಯಿದೆ. ಆರೋಪಿ ಪೂನಾವಾಲಾ ತನ್ನೊಂದಿಗೆ ಲಿವಿಂಗ್ ಟುಗೆದರ್ ರಿಲೇಷನ್ಶಿಪ್ ಹೊಂದಿದ್ದ ಶ್ರದ್ಧಾ ವಾಕರ್ ಅವರನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಆಕೆಯ ದೇಹವನ್ನು ತುಂಡು ತುಂಡು ಮಾಡಿರುವುದು ಸೇರಿದಂತೆ ಸಾಕ್ಷ್ಯ ನಾಶಪಡಿಸಿದ ಆರೋಪವೂ ಆತನ ಮೇಲೆ ಇದೆ.
ಆದೇಶ ಕಾಯ್ದಿರಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು: ಏಪ್ರಿಲ್ 15 ರಂದು, ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನಿಷಾ ಖುರಾನಾ ಕಕ್ಕರ್ ಅವರು ಪ್ರಾಸಿಕ್ಯೂಷನ್ ವಕೀಲರು ಮತ್ತು ಆರೋಪಿಗಳ ವಾದವನ್ನು ಆಲಿಸಿದ ನಂತರ ಆರೋಪಗಳನ್ನು ರೂಪಿಸುವ ಆದೇಶವನ್ನು ಕಾಯ್ದಿರಿಸಿದ್ದರು. ತನಿಖಾ ಸಂಸ್ಥೆಯು ಏಪ್ರಿಲ್ 15 ರಂದು ವಾಕರ್ ತಂದೆಯ ಅರ್ಜಿಯ ಮೇಲೆ ಉತ್ತರವನ್ನು ಸಲ್ಲಿಸಲು ಸಮಯ ಕೋರಿತ್ತು. ಪುನಾವಾಲಾ ವಿರುದ್ಧ ದೆಹಲಿ ಪೊಲೀಸರು ಐಪಿಸಿಯ ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷಿ ನಾಶಕ್ಕೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಕಲ್ಲಿನಿಂದ ಹೊಡೆದು ಯುವಕನ ಹತ್ಯೆ : ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಕ್ಕೆ ಕೊಲೆ ಶಂಕೆ
6,629 ಪುಟಗಳ ಚಾರ್ಜ್ ಶೀಟ್: ಜನವರಿ 24ರಂದು ದೆಹಲಿ ಪೊಲೀಸರು ಪ್ರಕರಣದಲ್ಲಿ 6,629 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದರು. ಕಳೆದ ವರ್ಷ ಮೇ 18ರಂದು ಪೂನಾವಾಲಾ ವಾಕರ್‌ಳನ್ನು ಕತ್ತು ಹಿಸುಕಿ ಕೊಂದು ಹಾಕಿ, ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮೆಹ್ರೌಲಿ ಅರಣ್ಯದಲ್ಲಿ ಎಸೆದಿರುವುದು ಬೆಳಕಿಗೆ ಬಂದಿತ್ತು. ಇದಕ್ಕೂ ಮೊದಲು, ಸುಮಾರು ಮೂರು ವಾರಗಳ ಕಾಲ ತಮ್ಮ ನಿವಾಸದಲ್ಲಿ ಫ್ರಿಡ್ಜ್ನಲ್ಲಿ ತುಂಡುಗಳನ್ನು ಇಟ್ಟುಕೊಂಡಿದ್ದ.
ಇದನ್ನೂ ಓದಿ: ಸಿಗರೇಟ್ ವಿಚಾರ: 8ನೇ ತರಗತಿ ಸ್ನೇಹಿತನನ್ನು ಕಲ್ಲಿನಿಂದ ಹೊಡೆದು ಕೊಂದ ಸಹಪಾಠಿಗಳು!
ಪಾಲಿಗ್ರಾಫ್ ಪರೀಕ್ಷೆಯಲ್ಲಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಆರೋಪಿ: ಈ ವೇಳೆ ಪೊಲೀಸರು ಅಫ್ತಾಬ್‌ನ ನಾರ್ಕೋ ಪರೀಕ್ಷೆ ನಡೆಸಿದ್ದರು. ಅದಕ್ಕೂ ಮೊದಲು ಪಾಲಿಗ್ರಫಿ ಪರೀಕ್ಷೆಯನ್ನೂ ಮಾಡಲಾಗಿತ್ತು. ಆತನಿಗೆ ಹಲವು ರೀತಿಯ ಪ್ರಶ್ನೆಗಳು ಹಾಗೂ ಉತ್ತರಗಳನ್ನು ಕೇಳಲಾಯಿತು. ನಂತರ ಚಾರ್ಜ್ಶೀಟ್ ಸಿದ್ಧಪಡಿಸಲಾಗಿದೆ. ದೆಹಲಿ ಪೊಲೀಸರು 6,629 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪಾಲಿಗ್ರಾಫ್ ಪರೀಕ್ಷೆಯಲ್ಲಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈವರೆಗೆ 150ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಸ್ಟಡಿ ಸೆಂಟರ್ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಮಾರಾಟ: ಮೂವರ ಬಂಧನ
ಇದನ್ನೂ ಓದಿ: ಬೈಜುಸ್ ಸಂಸ್ಥಾಪಕರ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿ