ರಾಂಚಿ: ಜಾರ್ಖಂಡ್‌ನಲ್ಲಿ ನಿರಂತರ ಲೋಡ್ ಶೆಡ್ಡಿಂಗ್‌ನಿಂದಾಗಿ ಸಾಮಾನ್ಯ ಜನರು ಮಾತ್ರವಲ್ಲದೇ ಶ್ರೀಮಂತರು ಸಹ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಜನರು ತುಂಬಾ ಅಸಮಾಧಾನಗೊಂಡಿದ್ದು, ತಮ್ಮ ಕೋಪವನ್ನು ಸಾಮಾಜಿಕ ಜಾಲತಾಣದ ಮೂಲಕ ಹೊರಹಾಕುತ್ತಿದ್ದಾರೆ. ಪವರ್ ಕಟ್ ಸಮಸ್ಯೆಯಿಂದ ಕಂಗೆಟ್ಟಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಧೋನಿ ಸಹ ಬೇಸರಗೊಂಡಿದ್ದಾರೆ. ಇಷ್ಟು ವರ್ಷಗಳಿಂದ ಈ ಸಮಸ್ಯೆ ಏಕೆ ಇತ್ತು ಎಂದು ಸಾಕ್ಷಿ ಜಾರ್ಖಂಡ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
-
As a tax payer of Jharkhand just want to know why is there a power crisis in Jharkhand since so many years ? We are doing our part by consciously making sure we save energy !
— Sakshi Singh 🇮🇳❤️ (@SaakshiSRawat) April 25, 2022 " class="align-text-top noRightClick twitterSection" data="
">As a tax payer of Jharkhand just want to know why is there a power crisis in Jharkhand since so many years ? We are doing our part by consciously making sure we save energy !
— Sakshi Singh 🇮🇳❤️ (@SaakshiSRawat) April 25, 2022As a tax payer of Jharkhand just want to know why is there a power crisis in Jharkhand since so many years ? We are doing our part by consciously making sure we save energy !
— Sakshi Singh 🇮🇳❤️ (@SaakshiSRawat) April 25, 2022
ಸೋಮವಾರ ಸಂಜೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ರಾಂಚಿಯ ರಾಜಕುಮಾರ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಧೋನಿ ಜಾರ್ಖಂಡ್‌ನಲ್ಲಿನ ವಿದ್ಯುತ್ ಸಮಸ್ಯೆಯ ಬಗ್ಗೆ ತಮ್ಮ ಕೋಪ ಹೊರ ಹಾಕಿದ್ದಾರೆ. ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಾರ್ಖಂಡ್‌ನಲ್ಲಿ ಇಷ್ಟು ವರ್ಷಗಳಿಂದ ವಿದ್ಯುತ್ ಸಮಸ್ಯೆ ಏಕೆ ಇದೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಓದಿ: ಓಣಂ ಖಾದ್ಯ ಸವಿದ ಸಾಕ್ಷಿ, ಜೀವಾ ಸಿಂಗ್ ಧೋನಿ : ಇನ್ಸ್ಟಾದಲ್ಲಿ ಫೋಟೋ ಹಂಚಿಕೆ
ಜಾರ್ಖಂಡ್‌ನ ತೆರಿಗೆ ಪಾವತಿದಾಳಾಗಿರುವ ನನಗೆ ಜಾರ್ಖಂಡ್‌ನಲ್ಲಿ ಇಷ್ಟು ವರ್ಷಗಳಿಂದ ವಿದ್ಯುತ್ ಸಮಸ್ಯೆ ಏಕೆ ಇದೆ ಎಂದು ತಿಳಿಯಲು ಬಯಸುತ್ತೇನೆ ಎಂದು ಸಾಕ್ಷಿ ಧೋನಿ ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ಕೇಳಿದ್ದಾರೆ.
ಜಾರ್ಖಂಡ್‌ನಲ್ಲಿ ವಿದ್ಯುತ್ ಕಡಿತದ ಸಮಸ್ಯೆ ನಿರಂತರವಾಗಿ ಕಂಡು ಬರುತ್ತಿದೆ. ಇದರಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಸಿಗುತ್ತಿಲ್ಲ. ರಾಜಧಾನಿ ರಾಂಚಿಯಲ್ಲೂ ಇದೆ ಸಮಸ್ಯೆಯಾಗಿದೆ. ಇಲ್ಲಿನ ಜನರು ಪ್ರತಿದಿನ ಲೋಡ್ ಶೆಡ್ಡಿಂಗ್ ಸಮಸ್ಯೆ ಎದುರಿಸುತ್ತಿದ್ದಾರೆ. ಇದರಿಂದಾಗಿ ಬಿಸಿಲಿನ ತಾಪದಲ್ಲಿ ಬಳಲುತ್ತಿದ್ದಾರೆ. ಭಾನುವಾರವೂ ರಾಜಧಾನಿಯ ಹಲವೆಡೆ ಮೂರ್ನಾಲ್ಕು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಸೋಮವಾರವೂ ಹೆಚ್ಚು ಕಡಿಮೆ ಅದೇ ಸ್ಥಿತಿ ಆಗಿತ್ತು. ಹೀಗಾಗಿ ಇದರಿಂದ ಬೇಸರಗೊಂಡಿದ್ದ ಸಾಕ್ಷಿ ಧೋನಿ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.
ದೇಶದ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿದೆ ಎಂಬ ವರದಿಗಳ ಮಧ್ಯೆ ಸಾಕ್ಷಿ ಈ ಟ್ವೀಟ್ ಸಂಚಲನ ಮೂಡಿಸುತ್ತಿದೆ. ಜಾರ್ಖಂಡ್ ರಾಜ್ಯದ ಬಹುತೇಕ ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ಕಂಡು ಬರುವುದರೊಂದಿಗೆ ಬಿಸಿಗಾಳಿಯೂ ಇದೆ. ಏಪ್ರಿಲ್ 28 ರವರೆಗೆ ಗಿರ್ಧಿ, ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್, ರಾಂಚಿ, ಬೊಕಾರೊ, ಕೊಡೆರ್ಮಾ, ಪಲಮು, ಗರ್ವಾ, ಛತ್ರ ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆ ಇದೆ.
ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆಯಲ್ಲಿ ದಕ್ಷತೆಯನ್ನು ಹೆಚ್ಚಿಸುವ ಕ್ರಮಗಳ ಕುರಿತು ಚರ್ಚಿಸಲು ಕೇಂದ್ರ ವಿದ್ಯುತ್ ಸಚಿವ ಆರ್‌ಕೆ ಸಿಂಗ್ ಸೋಮವಾರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ್ದಾರೆ. ಅಡೆತಡೆಯಿಲ್ಲದ ವಿದ್ಯುತ್ ಸರಬರಾಜಿಗೆ ಕೈಜೋಡಿಸುವಂತೆ ಕೇಂದ್ರ ಮತ್ತು ರಾಜ್ಯ ಮಟ್ಟದ ಎಲ್ಲ ಪಾಲುದಾರರನ್ನು ಸಿಂಗ್ ಒತ್ತಾಯಿಸಿದ್ದಾರೆ ಎಂದು ವಿದ್ಯುತ್ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.