ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಿರುವ ಕುರಿತು ಸಮಾಜವಾದಿ ಪಕ್ಷದ ಸಂಸದ ಶಫಿಕರ್ ರೆಹಮಾನ್ ಬಾರ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಾಲಿಬಾನ್‌ಗಳು ಅಫ್ಘಾನ್‌ನಲ್ಲಿ ಸ್ವಾತಂತ್ರ್ಯವನ್ನು ಬಯಸಿದ್ದಾರೆ ಎಂದು ಭಾರತದ ಸ್ವಾತಂತ್ರ್ಯ ಚಳುವಳಿಗೆ ಹೋಲಿಸಿ ಹೇಳಿದ್ದಾರೆ. ಉತ್ತರ ಪ್ರದೇಶ ಸಂಭಾಲ್ ಲೋಕಸಭಾ ಸಂಸದ ಶಫಿಕರ್ ಅವರ ಈ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.
ರಷ್ಯಾ ಮತ್ತು ಅಮೆರಿಕ ಅಫ್ಘಾನಿಸ್ತಾನವನ್ನು ಆಳಲು ತಾಲಿಬಾನ್ ಅನುಮತಿಸುವುದಿಲ್ಲ. ಈಗ ಅವರು ತಮ್ಮ ದೇಶವನ್ನು ಆಳಲು ಬಯಸುತ್ತಾರೆ. ದೇಶವನ್ನು ಬ್ರಿಟಿಷರು ಆಳಿದಾಗ, ಇಡೀ ದೇಶವು ಅವರ ವಿರುದ್ಧ ಹೋರಾಡಿತು. ಅದೇ ರೀತಿ, ಅವರಿಗೆ ಸ್ವಾತಂತ್ರ್ಯ ಬೇಕು. ಅದು ಅವರ ಆಂತರಿಕ ವ್ಯವಹಾರವಾಗಿದೆ. ನಾವು ಅದರಲ್ಲಿ ಹೇಗೆ ಹಸ್ತಕ್ಷೇಪ ಮಾಡುತ್ತೇವೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಆಫ್ಘನ್ ಬಿಕ್ಕಟ್ಟು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ
ಬಾರ್ಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನಾಚಿಕೆಯಿಲ್ಲದೆ ತಾಲಿಬಾನ್‌ಗಳನ್ನು ಶಫಿಕರ್ ರೆಹಮಾನ್ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ನಾವು ಪ್ರಜಾಪ್ರಭುತ್ವದಲ್ಲಿದ್ದೇವೆ. ಆದ್ರೆ ಇವರು ಮಾನವೀಯತೆಗೆ ಬೆಂಕಿ ಹಚ್ಚುವವರನ್ನು ಬೆಂಬಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಸಂಸದರ ಹೇಳಿಕೆ ಕೇಳಲಿಲ್ಲ. ಆದರೆ, ಬಾರ್ಕ್ ಅಂತಹ ಟೀಕೆಗಳನ್ನು ಮಾಡಿದ್ದರೆ, ಅವರು ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಯಾವುದೇ ದೊಡ್ಡ ವ್ಯತ್ಯಾಸವಿರಲಿಲ್ಲ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಪ್ರತಿಕ್ರಿಯಿಸಿದ್ದಾರೆ.