ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ರಾಮ ದೇವಾಲಯ ನಿರ್ಮಾಣಕ್ಕಾಗಿ ಇಲ್ಲಿಯವರೆಗೆ 3,000 ಕೋಟಿ ರೂ. ಸಂಗ್ರಹವಾಗಿದ್ದು, ಮನೆ-ಮನೆಗೆ ಬಂದು ಹಣ ಸಂಗ್ರಹ ಮಾಡುವ ಕೆಲಸವನ್ನು ನಿಲ್ಲಿಸಲಾಗಿದ್ದರೂ ಕೂಡ ದೇಣಿಗೆಯನ್ನು ಟ್ರಸ್ಟ್‌ನ ನಿಯಮಿತ ಖಾತೆಗೆ ಹಸ್ತಾಂತರಿಸಬಹುದು ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.
ದೇವಾಲಯದ ನಿರ್ಮಾಣಕ್ಕಾಗಿ ದೇಣಿಗೆ ನೀಡುವ ಜನಸಾಮಾನ್ಯರ ಉತ್ಸಾಹ ಮತ್ತು ಸಹಕಾರವನ್ನು ರಾಯ್ ಶ್ಲಾಘಿಸಿದ್ದಾರೆ. ಜನರು ತಮ್ಮ ನಿರೀಕ್ಷೆಗಿಂತ ನಾಲ್ಕು ಪಟ್ಟು ಹೆಚ್ಚು ದೇಣಿಗೆ ನೀಡಿದ್ದಾರೆ. ದೇಣಿಗೆ ನೀಡಲು ಬಯಸುವ ಭಕ್ತರು ರಾಮ್ ದೇವಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಆನ್‌ಲೈನ್ ಮೂಲಕ ಪಾವತಿ ಮಾಡಬಹುದು ಎಂದು ಶ್ರೀ ರಾಮ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಇದೇ ವೇಳೆ ತಿಳಿಸಿದರು.