ಮುಂಬೈ : ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರ ಪತ್ನಿ ನಟಿ ಕ್ರಾಂತಿ ರೆಡ್ಕರ್ ಅವರು, ಗೂಗಲ್, ಫೇಸ್‌ಬುಕ್/ಮೆಟಾ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ದುರುದ್ದೇಶಪೂರಿತ ಮತ್ತು ಮಾನಹಾನಿಕರ ವಿಷಯಗಳನ್ನು ಪ್ರಕಟಿಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಡಿಂಡೋಶಿಯ ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿದ್ದಾರೆ.
ವಾಂಖೆಡೆ ಅವರ ಪತ್ನಿ ನಟಿ ಕ್ರಾಂತಿ ರೆಡ್ಕರ್, ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 79ರ ಅಡಿಯಲ್ಲಿ ಆದೇಶವನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಕೆಲವೊಂದು ವರದಿಗಳು, ಪೋಸ್ಟ್ಗಳು ದಂಪತಿ ನಡುವಿನ ಕಲಹಕ್ಕೆ ಕಾರಣವಾಗಬಹುದು. ಹಾಗಾಗಿ, ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವಿಷಯವನ್ನು ಶಾಶ್ವತವಾಗಿ ತೆಗೆದು ಹಾಕುವಂತೆ ಬೇಡಿಕೆ ಇಟ್ಟಿದ್ದಾರೆ.