ಛತ್ರಪತಿ ಸಂಭಾಜಿನಗರ (ಮಹಾರಾಷ್ಟ್ರ): ಇಲ್ಲಿನ ವೈಜಾಪುರ ಸಮೀಪದ ಸಮೃದ್ಧಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಮಗು ಸೇರಿ ಒಟ್ಟು 12 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಆದಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವೈಜಾಪುರ ಮತ್ತು ಚಿ. ಸಂಭಾಜಿನಗರದ ಘಾಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ಇಲ್ಲಿನ ಸೈಲಾನಿ ಬಾಬಾ ದರ್ಶನಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
ವೈಜಾಪುರ ಸಮೀಪದ ಸಮೃದ್ಧಿ ಹೆದ್ದಾರಿಯ ಜಾಂಬರ ಗ್ರಾಮದ ಟೋಲ್ ಬೂತ್ ನಲ್ಲಿ ಈ ದುರ್ಘಟನೆ ನಡೆದಿದೆ. ಭಕ್ತರನ್ನು ಹೊತ್ತು ಸಾಗುತ್ತಿದ್ದ ಟೆಂಪೋ ಟ್ರಾವೆಲರ್ ಹೆದ್ದಾರಿ ಬದಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಭಕ್ತರೆಲ್ಲರು ನಾಸಿಕ್ ಜಿಲ್ಲೆಯ ಪಥರ್ಡಿ ಮತ್ತು ಇಂದಿರಾನಗರ ನಿವಾಸಿಗಳು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು