ನವದೆಹಲಿ: ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆ ವಿರುದ್ಧ ರೈತರು ಹೋರಾಟ ಆರಂಭಿಸಿ ನವೆಂಬರ್ 26ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ನವೆಂಬರ್ 29ರಿಂದ ಆರಂಭಗೊಳ್ಳಲಿರುವ ಸಂಸತ್ ಚಳಿಗಾಲದ ಅಧಿವೇಶನದ ವೇಳೆ ದೊಡ್ಡ ಮಟ್ಟದ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧಾರ ಕೈಗೊಂಡಿತ್ತು. ಆದರೆ ಇಂದು ನಡೆದ ಸಭೆಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ಮುಂದೂಡಿಕೆ ಮಾಡಿದೆ.
ಸಿಂಘು ಗಡಿಯಲ್ಲಿ ಇಂದು ನಡೆದ ಸಂಯುಕ್ತ ಕಿಸಾನ್ ಮೋರ್ಚಾ ರೈತರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಡಿಸೆಂಬರ್ 4ರವರೆಗೆ ಕಾಲಾವಕಾಶ ನೀಡಿರುವ ಕಾರಣ ಟ್ರಾಕ್ಟರ್ ರ್‍ಯಾಲಿಯನ್ನು ಮುಂದೂಡಿದೆ.
-
After a meeting, Samyukt Kisan Morcha has decided to postpone the proposed tractor rally to Parliament on November 29: Farmer leader Darshan Pal Singh in Delhi pic.twitter.com/sRskbis3MI
— ANI (@ANI) November 27, 2021 " class="align-text-top noRightClick twitterSection" data="
">After a meeting, Samyukt Kisan Morcha has decided to postpone the proposed tractor rally to Parliament on November 29: Farmer leader Darshan Pal Singh in Delhi pic.twitter.com/sRskbis3MI
— ANI (@ANI) November 27, 2021After a meeting, Samyukt Kisan Morcha has decided to postpone the proposed tractor rally to Parliament on November 29: Farmer leader Darshan Pal Singh in Delhi pic.twitter.com/sRskbis3MI
— ANI (@ANI) November 27, 2021
ಕೇಂದ್ರ ಸರ್ಕಾರ ಈಗಾಗಲೇ ವಿವಾದಿತ ಮೂರು ಕೃಷಿ ಕಾಯ್ದೆ ಹಿಂಪಡೆದುಕೊಂಡಿದ್ದು, ಸೋಮವಾರದಿಂದ ಆರಂಭಗೊಳ್ಳಲಿರುವ ಸಂಸತ್ ಅಧಿವೇಶನದಲ್ಲಿ ಬಿಲ್ ಮಂಡಿಸುವ ಸಾಧ್ಯತೆ ಇದೆ. ಆದರೆ ಕನಿಷ್ಠ ಬೆಂಬಲ ಬೆಲೆ ವಿಚಾರವಾಗಿ ಕೇಂದ್ರ ಸರ್ಕಾರ ಇಲ್ಲಿಯವರೆಗೆ ರೈತರೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ. ಇದೇ ಕಾರಣಕ್ಕಾಗಿ ನವೆಂಬರ್ 29ರಂದು ಕಿಸಾನ್ ಯೂನಿಯನ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಮುಂದಾಗಿತ್ತು.
ಇದನ್ನೂ ಓದಿರಿ: 21ನೇ ವಯಸ್ಸಿಗೇ ಬಿಹಾರದ ಗ್ರಾ. ಪಂ ಅಧ್ಯಕ್ಷೆ.. ಹೊಸ ದಾಖಲೆ ಬರೆದ ಆಯೇಷಾ
ಕನಿಷ್ಠ ಬೆಂಬಲ ಬೆಲೆ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ರೈತ ಸಂಘಟನೆಗಳು ಪತ್ರ ಬರೆದಿದ್ದು, ಡಿಸೆಂಬರ್ 4ರವರೆಗೆ ಕಾಲಾವಕಾಶ ನೀಡಿವೆ. ಇದೇ ಕಾರಣಕ್ಕಾಗಿ ಟ್ರಾಕ್ಟರ್ ರಾಲಿ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಮಾಧ್ಯಮಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ರೈತ ಮುಖಂಡ ದರ್ಶನ್ ಪಾಲ್ ಸಿಂಗ್, ನವೆಂಬರ್ 29ರಂದು ನಡೆಸಲು ನಿರ್ಧರಿಸಲಾಗಿದ್ದ ಟ್ರ್ಯಾಕ್ಟರ್ ರ್‍ಯಾಲಿ ಹಿಂಪಡೆದುಕೊಳ್ಳಲಾಗಿದ್ದು, ಕೇಂದ್ರ ಸರ್ಕಾರ ನಮ್ಮೊಂದಿಗೆ ಮಾತುಕತೆ ನಡೆಸುವವರೆಗೂ ಪ್ರತಿಭಟನೆ ಹಿಂಪಡೆದುಕೊಳ್ಳುವುದಿಲ್ಲ ಎಂದಿದ್ದಾರೆ.
ರೈತರ ಹೋರಾಟದ ವೇಳೆ ಅನೇಕರು ಸಾವನ್ನಪ್ಪಿದ್ದು, ಕೇಂದ್ರ ಸರ್ಕಾರ ಈ ಕುರಿತಂತೆಯೂ ನಮ್ಮೊಂದಿಗೆ ಮಾತನಾಡಬೇಕು. ಈಗಾಗಲೇ ಮೋದಿ ಸರ್ಕಾರಕ್ಕೆ ಇದರ ಬಗ್ಗೆ ಪತ್ರ ಬರೆದಿದ್ದು, ಉತ್ತರಕ್ಕಾಗಿ ಎದುರು ನೋಡುತ್ತಿದ್ದೇವೆ. ಡಿಸೆಂಬರ್ 4ರಂದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.