ನಾಸಿಕ್: ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ. ಇನ್ನು ಮಹಾವಿಕಾಸ್ ಅಘಾಡಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷಕ್ಕೆ ಮಹಾರಾಷ್ಟ್ರ ಸಾಕ್ಷಿಯಾಗುತ್ತಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದರು.
ರಾಜ್ಯಪಾಲರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯ ಮೇಲೆ ತೀವ್ರ ಪ್ರಭಾವದಲ್ಲಿ ರಾಜ್ಯಪಾಲರನ್ನು ಬಿಜೆಪಿ ಬಳಸಿಕೊಂಡು ಬಹಿರಂಗ ಸಮರ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಕೈಗೊಳ್ಳುವ ಹಲವಾರು ಯೋಜನೆಗಳಿಗೆ ಬಿಜೆಪಿ ಅನುಮೋದನೆಬೇಕು. ಆದರೆ ರಾಜಕೀಯ ಒತ್ತಡದಿಂದ ಅದು ತಡೆಹಿಡಿದಿದೆ. ಇನ್ನು ಕ್ಯಾಬಿನೆಟ್ಗೆ 12 ಮಂದಿಯನ್ನು ಸೇರ್ಪಡೆ ಮಾಡುವ ಹಿನ್ನೆಲೆಯಲ್ಲಿ ರಾಜ್ಯಪಾಲರ ಅನುಮತಿಬೇಕು ಅದು ವಿಳಂಬವಾಗಿದೆ ಬಿಜೆಪಿಯ ಒತ್ತಡಕ್ಕೆ ಮಣಿದು ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ ಎಂದರು.
ಇದು ಶೀತಲ ಸಮರವಲ್ಲ, ಬಹಿರಂಗ ಸಮರ. ರಾಜಭವನವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.