ಚೆನ್ನೈ, ತಮಿಳುನಾಡು: ಅಣ್ಣಾ ಡಿಎಂಕೆ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಶಶಿಕಲಾ ಪಕ್ಷಕ್ಕೆ ಮರಳಿ ಬರುವುದಾದರೆ ನಮ್ಮ ಒಪ್ಪಿಗೆಯಿದ್ದು, ಅವರು ಪಕ್ಷದ ಆಂತರಿಕ ಪ್ರಜಾಪ್ರಭುತ್ವಕ್ಕೆ ಬದ್ಧರಾಗಿರಬೇಕು ಎಂದು ತಮಿಳುನಾಡು ಉಪಮುಖ್ಯಮಂತ್ರಿ ಮತ್ತು ಅಣ್ಣಾಡಿಎಂಕೆ ಹಿರಿಯ ನಾಯಕ ಓ.ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಮಂಗಳವಾರ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಓ.ಪನ್ನೀರ್ ಸೆಲ್ವಂ, ಶಶಿಕಲಾ ಅಣ್ಣಾಡಿಎಂಕೆ ಪಕ್ಷದ ಅಭಿವೃದ್ಧಿಗೆ ಸ್ವಲ್ಪ ಕಾಣಿಕೆ ನೀಡಿದ್ದಾರೆ. ಅವರೊಂದಿಗೆ ನಾನು ಯಾವುದೇ ವೈಯಕ್ತಿಕ ದ್ವೇಷ ಹೊಂದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ವಿಮ್ಸ್ನ ಮತ್ತೆ 7 ಎಂಬಿಬಿಎಸ್ ವಿದ್ಯಾರ್ಥಿಗಳಲ್ಲಿ ಕೊರೊನಾ... ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ ಮತ್ತು ಶಶಿಕಲಾ ವಿರುದ್ಧ ಕೆಲವು ಅನುಮಾನಗಳಿವೆ ಎಂದು ಡಿಸಿಎಂ ಹೇಳಿದ್ದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಎಐಎಡಿಎಂಕೆಗೆ ಶಶಿಕಲಾ ವಾಪಸಾಗುವ ಬಗ್ಗೆ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಸ್ವಾಗತಿಸಿದ್ದಾರೆ ಎಂದು ಪನ್ನೀರ್ ಸೆಲ್ವಂ ಹೇಳಿದ್ದು, ಮತ್ತೊಂದೆಡೆ ವಿಧಾನಸಭಾ ಚುನಾವಣೆಗೆ ತಮ್ಮದೇ ಪಕ್ಷದಿಂದ ತಯಾರಿ ನಡೆಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಶಶಿಕಲಾ ಮತ್ತೆ ಎಐಎಡಿಎಂಕೆ ಪಕ್ಷಕ್ಕೆ ಬರುವ ಅವಕಾಶವಿದೆ. ಶಶಿಕಲಾ ಮತ್ತು ಪನ್ನೀರ್ ಸೆಲ್ವಂ ತೇವರ್ ಸಮುದಾಯಕ್ಕೆ ಸೇರಿದವರಾಗಿದ್ದು, ಚುನಾವಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.