ETV Bharat / bharat

ಸಾವರ್ಕರ್ ಸಮಾಜ ಸುಧಾರಕ, ಶಾಲಾಪಠ್ಯದಿಂದ ಅಧ್ಯಾಯ ಕೈಬಿಟ್ಟಿರುವುದು ನೋವಿನ ಸಂಗತಿ: ನಿತಿನ್‌ ಗಡ್ಕರಿ - RSS founder K B Hedgewar

ಶಾಲಾ ಪಠ್ಯಕ್ರಮದಿಂದ ವಿ.ಡಿ. ಸಾವರ್ಕರ್ ಮತ್ತು ಆರ್​ಎಸ್​ಎಸ್​ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಕುರಿತ ಅಧ್ಯಾಯಗಳನ್ನು ತೆಗೆದುಹಾಕುತ್ತಿರುವುದು ಅತ್ಯಂತ ದುರಾದೃಷ್ಟಕರ. ಇದಕ್ಕಿಂತ ನೋವಿನ ಸಂಗತಿ ಇನ್ನೊಂದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Union minister Nitin Gadkari
ಕೇಂದ್ರ ಸಚಿವ ನಿತಿನ್ ಗಡ್ಕರಿ
author img

By

Published : Jun 18, 2023, 10:46 AM IST

ನಾಗ್ಪುರ (ಮಹಾರಾಷ್ಟ್ರ) : ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಅವರು ಸಮಾಜ ಸುಧಾರಕ ಮಾತ್ರವಲ್ಲದೇ ದೇಶಭಕ್ತರಾಗಿದ್ದರು. ಇದೀಗ, ಸಾವರ್ಕರ್ ಮತ್ತು ಆರ್​ಎಸ್​ಎಸ್​ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಅವರ ಕುರಿತಾದ ಅಧ್ಯಾಯಗಳನ್ನು ಶಾಲಾ ಪಠ್ಯಕ್ರಮದಿಂದ ತೆಗೆದುಹಾಕುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶನಿವಾರ ಬೇಸರ ವ್ಯಕ್ತಪಡಿಸಿದರು.

ನಾಗ್ಪುರದಲ್ಲಿ ನಡೆದ ವೀರ್ ಸಾವರ್ಕರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ, "ದೇಶಕ್ಕಾಗಿ ಎಲ್ಲವನ್ನೂ ನೀಡಿದ ವ್ಯಕ್ತಿ ಸಾವರ್ಕರ್, ಸಮಾಜ ಸುಧಾರಕರಾಗಿ ಕೆಲಸ ಮಾಡಿ ನಮಗೆ ಮಾದರಿಯಾಗಿದ್ದವರು. ಇದೀಗ ಅವರಿಗೆ ಅವಮಾನ ಮಾಡುತ್ತಿರುವುದು ದುರಾದೃಷ್ಟಕರ. ಹಿಂದುತ್ವವು ಎಲ್ಲರನ್ನೂ ಒಳಗೊಳ್ಳುವ, ಜಾತೀಯತೆ ಮತ್ತು ಕೋಮುವಾದದಿಂದ ಮುಕ್ತವಾಗಿದೆ ಎಂದು ಅವರು ಈ ಹಿಂದೆಯೇ ಹೇಳಿದ್ದರು" ಅಂತಾ ಅಭಿಪ್ರಾಯ ವ್ಯಕ್ತಪಡಿಸಿದರು.

ಡಾ. ಹೆಡ್ಗೆವಾರ್ ಮತ್ತು ಸಾವರ್ಕರ್ ಅವರನ್ನು ಶಾಲಾ ಪಠ್ಯಕ್ರಮದಿಂದ ತೆಗೆದುಹಾಕುತ್ತಿರುವುದು ಸರಿಯಲ್ಲ. ಇದಕ್ಕಿಂತ ನೋವಿನ ಸಂಗತಿ ಇನ್ನೊಂದಿಲ್ಲ ಎಂದು ಯಾವೊಬ್ಬ ರಾಜಕೀಯ ನಾಯಕರ ಹೆಸರನ್ನೂ ಹೇಳದೆ ಗಡ್ಕರಿ ಬೇಸರ ಹೊರಹಾಕಿದರು. ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಇತ್ತೀಚೆಗೆ ಶಾಲಾ ಪಠ್ಯಪುಸ್ತಕಗಳಿಂದ ಸಾವರ್ಕರ್ ಮತ್ತು ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ತೆಗೆದುಹಾಕುವ ಮಹತ್ವದ ನಿರ್ಧಾರ ಕೈಗೊಂಡಿತ್ತು. ಈ ಹಿಂದೆ ಸಾವರ್ಕರ್ ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ರಾಷ್ಟ್ರೀಯ ನಾಯಕರೊಬ್ಬರು ಸಾವರ್ಕರ್ ಅವರನ್ನು ಟೀಕಿಸಿದ್ದರು. ಸರಿಯಾಗಿ ಯಾರ ಬಗ್ಗೆಯೂ ತಿಳಿದುಕೊಳ್ಳದೆ ಟೀಕೆ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ಗೋಡ್ಸೆ, ಸಾವರ್ಕರ್​ ಬೆಂಬಲಿಗರಿಂದ ನಮಗೆ ಪಾಠ ಬೇಕಿಲ್ಲ : ಅಮಿತ್​ ಶಾಗೆ ಸಿದ್ದರಾಮಯ್ಯ ಟಾಂಗ್​

"ಸಾವರ್ಕರ್ ಮತ್ತು ವಿವೇಕಾನಂದರು ಪ್ರಚಾರ ಮಾಡಿದ ಭಾರತೀಯ ಮತ್ತು ಹಿಂದೂ ಸಂಸ್ಕೃತಿ ಒಂದೇ ಆಗಿದ್ದು, ಯುವ ಪೀಳಿಗೆಗೆ ಅವರ ಸಿದ್ಧಾಂತ ಮತ್ತು ದೇಶಕ್ಕಾಗಿ ಸಾವರ್ಕರ್ ಮಾಡಿದ ತ್ಯಾಗದ ಕುರಿತು ಅರಿವು ಮೂಡಿಸಬೇಕು" ಎಂದು ಇದೇ ವೇಳೆ ಸಲಹೆ ನೀಡಿದರು.

ಇದನ್ನೂ ಓದಿ : ನಮ್ಮದು ಮಹಾತ್ಮ ಗಾಂಧಿ ಹಿಂದುತ್ವವಾದರೆ, ಬಿಜೆಪಿಯವರದ್ದು ಸಾರ್ವಕರ್ ಹಿಂದುತ್ವ : ಸಿದ್ದರಾಮಯ್ಯ

ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? : ನಿನ್ನೆ (ಶನಿವಾರ) ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, "ಸರ್ಕಾರವು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು, ಈ ಹಿಂದಿನ ಬಿಜೆಪಿ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಆರ್‌ಎಸ್‌ಎಸ್‌ ಮುಖಂಡ ಹೆಡ್ಗೆವಾರ್‌, ಹಿಂದೂ ಮಹಾಸಭಾ ಮುಖಂಡ ವಿ.ಡಿ. ಸಾವರ್ಕರ್‌ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಪಠ್ಯವನ್ನು ಕೈಬಿಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದೆ" ಎಂದು ಹೇಳಿದರು.

ಇದನ್ನೂ ಓದಿ : Textbook Revision : ಹೆಡ್ಗೇವಾರ್, ಸಾವರ್ಕರ್ ಕುರಿತಾದ ಪಠ್ಯ ಹಿಂತೆಗೆತ.. ಶಾಲಾ, ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಲು ತೀರ್ಮಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.