ನವದೆಹಲಿ: ವಿವಿಧ ವಲಯಗಳಿಂದ ಟೀಕೆಗಳನ್ನು ಎದುರಿಸಿದ ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗರ್ಭಿಣಿಯರ ನೇಮಕಾತಿಯ ಕುರಿತ ಸುತ್ತೋಲೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ.
ಸುತ್ತೋಲೆಯಲ್ಲಿ ಏನಿತ್ತು?: ಡಿಸೆಂಬರ್ 31 ರಂದು ಸುತ್ತೋಲೆ ಹೊರಡಿಸಿದ್ದ ಎಸ್‌ಬಿಐ, ಮೂರು ತಿಂಗಳ ಮೇಲ್ಪಟ್ಟ ಗರ್ಭಿಣಿಯರು ಸೇವೆಗೆ ಸೇರದಂತೆ ತಡೆಯುವ ಮಾರ್ಗಸೂಚಿಗಳನ್ನು ಜಾರಿ ಮಾಡಿ, ಅವರನ್ನು 'ತಾತ್ಕಾಲಿಕವಾಗಿ ಅನರ್ಹ' ಎಂದು ಹೇಳಿತ್ತು. ಅಷ್ಟೇ ಅಲ್ಲದೆ, ಹೆರಿಗೆಯಾದ ನಾಲ್ಕು ತಿಂಗಳೊಳಗೆ ಸೇವೆಗೆ ಅನುಮತಿಸಲಾಗುವುದು ಎಂದು ತಿಳಿಸಿತ್ತು.
ಇದನ್ನೂ ಓದಿ: 3 ತಿಂಗಳು ಮೇಲ್ಪಟ್ಟ ಗರ್ಭಿಣಿಯರು ಸೇವೆಗೆ ಬೇಡ ಎಂದ ಎಸ್‌ಬಿಐಗೆ ಮಹಿಳಾ ಆಯೋಗ ನೋಟಿಸ್..
ಇದನ್ನು ತೀವ್ರವಾಗಿ ಖಂಡಿಸಿದ್ದ ದೆಹಲಿ ಮಹಿಳಾ ಆಯೋಗವು, ಬ್ಯಾಂಕಿನ ಈ ಕ್ರಮವು ತಾರತಮ್ಯ ಮತ್ತು ಕಾನೂನುಬಾಹಿರವಾಗಿದೆ. ಇದು ತುಂಬಾ ಗಂಭೀರವಾದ ವಿಷಯವಾಗಿದ್ದು, ಕಾನೂನಿನ ಅಡಿಯಲ್ಲಿ (ಸಾಮಾಜಿಕ ಭದ್ರತೆ ಸಂಹಿತೆ, 2020) ಒದಗಿಸಲಾದ ಹೆರಿಗೆ ಪ್ರಯೋಜನಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿ ಎಸ್‌ಬಿಐಗೆ ಇಂದು ನೋಟಿಸ್ ನೀಡಿತ್ತು. ಇದರ ಬೆನ್ನಲ್ಲೇ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಸುತ್ತೋಲೆಯನ್ನು ರದ್ದುಗೊಳಿಸಿರುವುದಾಗಿ ಹೇಳಿದೆ.
ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ