ETV Bharat / bharat

ಚುನಾವಣಾ ಬಾಂಡ್​ ಪ್ರಶ್ನಿಸಿದ ಅರ್ಜಿ ವಿಚಾರಣೆ 2023ರ ಜನವರಿಗೆ ಮುಂದೂಡಿದ ಸುಪ್ರೀಂ ಕೋರ್ಟ್​ - ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಉದ್ದೇಶ

ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗವೂ ತನ್ನ ಕಳವಳವನ್ನು ವ್ಯಕ್ತಪಡಿಸಿದ್ದು, ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಉದ್ದೇಶದಿಂದ ಸುಳ್ಳು ಕಂಪನಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿತ್ತು.

ಚುನಾವಣಾ ಬಾಂಡ್​ ಪ್ರಶ್ನಿಸಿದ ಅರ್ಜಿ ವಿಚಾರಣೆ 2023ರ ಜನವರಿಗೆ ಮುಂದೂಡಿದ ಸುಪ್ರೀಂ ಕೋರ್ಟ್​
sc-adjourns-hearing-on-pleas-challenging-electoral-bonds-till-jan-2023
author img

By

Published : Dec 15, 2022, 7:35 PM IST

ನವದೆಹಲಿ: ಚುನಾವಣಾ ಬಾಂಡ್‌ಗಳ ಮಾರಾಟದ ಸಮಯವನ್ನು ಜನವರಿ ಕೊನೆಯ ವಾರದವರೆಗೆ ವಿಸ್ತರಿಸಿದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 2023ರ ಜನವರಿಗೆ ಮುಂದೂಡಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರನ್ನೊಳಗೊಂಡ ಪೀಠವು ಇದೇ ರೀತಿಯ ವಿಷಯ (ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪ್ರಶ್ನಿಸುವ ಮನವಿ) ನ್ಯಾಯಾಲಯದ ಮುಂದೆ ಬಾಕಿ ಉಳಿದಿವೆ ಮತ್ತು ಪ್ರಸ್ತುತ ಮನವಿಯನ್ನು ಸಹ ಅದೇ ಟ್ಯಾಗ್ ಮಾಡಿ ಒಟ್ಟಿಗೆ ವಿಚಾರಣೆ ಮಾಡಲಾಗುತ್ತದೆ ಎಂದು ಹೇಳಿದೆ.

ಈ ವಿಚಾರ 2015 ರಿಂದ ಬಾಕಿ ಉಳಿದಿದೆ. ರಜೆಯ ಹಿಂದಿನ ಅಂತಿಮ ದಿನದಂದು ಇದನ್ನು ಕೇಳಬೇಕಾದ ತುರ್ತು ಏನಿದೆ? ಎಂದು ನ್ಯಾಯಮೂರ್ತಿ ಗವಾಯಿ ಪ್ರಶ್ನಿಸಿದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್‌ ಭೂಷಣ್‌, ಈ ಕುರಿತು ಹಲವು ಬಾರಿ ವಿಚಾರಣೆಗೆ ಯತ್ನಿಸಿದರೂ ನಡೆದಿಲ್ಲ ಎಂದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಎಎಸ್‌ಜಿ ಐಶ್ವರ್ಯಾ ಭಾಟಿ, ಈ ವಿಷಯವನ್ನು ಸುದೀರ್ಘವಾಗಿ ಆಲಿಸಬೇಕಾಗಿದೆ ಎಂದು ಹೇಳಿದರು. ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ಒಪ್ಪಿಸಬೇಕೇ ಅಥವಾ ಬೇಡವೇ ಎಂಬುದನ್ನು ನ್ಯಾಯಾಲಯ ನಿರ್ಧರಿಸಬೇಕು ಎಂದು ವಕೀಲ ಭೂಷಣ್ ಹೇಳಿದರು. 2023ರ ಜನವರಿ ಕೊನೆಯ ವಾರದಲ್ಲಿ ಎಲ್ಲವನ್ನೂ ಪರಿಗಣಿಸುವುದಾಗಿ ನ್ಯಾಯಾಲಯ ಹೇಳಿದೆ.

ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪ್ರಶ್ನಿಸಿ ಸಿಪಿಐ(ಎಂ), ಎಡಿಆರ್ ಮತ್ತು ಇತರ ಎನ್‌ಜಿಒಗಳು ಉನ್ನತ ನ್ಯಾಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸಿವೆ. ಈ ಯೋಜನೆಯು ಖಾಸಗಿ ಕಾರ್ಪೊರೇಟ್‌ಗಳಿಂದ ಹಣದ ಒಳಹರಿವಿಗೆ ಕಾರಣವಾಗುತ್ತದೆ ಮತ್ತು ರಾಜಕೀಯ ಪಕ್ಷಗಳಿಗೆ ಯಾರು ಪಾವತಿಸಿದ್ದಾರೆ ಎಂಬುದನ್ನು ಮತದಾರರಿಗೆ ತಿಳಿಸಲು ಯೋಜನೆಯಲ್ಲಿ ಯಾವುದೇ ಪಾರದರ್ಶಕತೆ ಇಲ್ಲ ಎಂದು ಅವರು ವಾದಿಸಿದ್ದಾರೆ.

ಈ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗವೂ ತನ್ನ ಕಳವಳವನ್ನು ವ್ಯಕ್ತಪಡಿಸಿದ್ದು, ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಉದ್ದೇಶದಿಂದ ಸುಳ್ಳು ಕಂಪನಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿತ್ತು. ವಿಧಾನಸಭೆ ಚುನಾವಣೆಗೆ ತಡೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಈ ವಿಷಯ ವಿಚಾರಣೆಗೆ ಬಂದಾಗ, ಇದರಲ್ಲಿ ಪಾರದರ್ಶಕತೆ ತರುವುದಾಗಿ ಹೇಳಿ ಯೋಜನೆಯನ್ನು ಸಮರ್ಥಿಸಿಕೊಂಡಿತ್ತು. ಆಗ ನ್ಯಾಯಾಲಯ ತಡೆ ನೀಡಲು ನಿರಾಕರಿಸಿತ್ತು.

ಇದನ್ನೂ ಓದಿ: ಎಸ್​ಬಿಐನ ಅಧಿಕೃತ ಬ್ರಾಂಚ್​ಗಳಲ್ಲಿ ಚುನಾವಣಾ ಬಾಂಡ್​ಗಳ ಮಾರಾಟಕ್ಕೆ ಅವಕಾಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.