ನವದೆಹಲಿ: ಕೇಂದ್ರ ಸರ್ಕಾರದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳ ಪರಿಶೀಲನೆಗೆ ಸುಪ್ರೀಂಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿಯು ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಕಾಯ್ದೆಗಳ ಸಂಬಂಧ ಸುಮಾರು 85 ರೈತ ಸಂಘಟನೆಗಳ ಮುಖಂಡರನ್ನು ಸಂಪರ್ಕಿಸಲಾಗಿದೆ. ಇದಕ್ಕೆ ಸಂಪರ್ಕಿತರನ್ನು ಭೇಟಿ ಮಾಡಿ ಪರಿಹಾರ ಕಂಡುಕೊಳ್ಳಲು ರೈತರೊಂದಿಗೆ ಸಭೆ ನಡೆಸಿದ ನಂತರ ನಡಾವಳಿಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.
ಇದನ್ನೂ ಓದಿ: 12 ತಿಂಗಳಲ್ಲಿ ಶೇ.52ರಷ್ಟು ಭಾರತೀಯ ಸಂಸ್ಥೆಗಳ ಮೇಲೆ ಗಂಭೀರ ಸೈಬರ್ ದಾಳಿ
ಕೃಷಿ ಕಾನೂನುಗಳನ್ನು ತಡೆಹಿಡಿಯುವಾಗ ಜನವರಿಯಲ್ಲಿ ಕೋರ್ಟ್ ಮೂರು ಸದಸ್ಯರ ಸಮಿತಿಯನ್ನು ರಚಿಸಿತ್ತು.
ಸಮಿತಿಯಲ್ಲಿ ಕೃಷಿ ಅರ್ಥಶಾಸ್ತ್ರಜ್ಞರಾದ ಅನಿಲ್ ಘನ್ವತ್, ಅಶೋಕ್ ಗುಲಾಟಿ ಮತ್ತು ಪ್ರಮೋದ್ ಜೋಶಿ ಇದ್ದರು. ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಭೂಪಿಂದರ್ ಸಿಂಗ್ ಮಾನ್ ಮತ್ತು ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿ ಕೂಡ ಆರಂಭದಲ್ಲಿ ಸಮಿತಿಯ ಭಾಗವಾಗಿತ್ತು. ಆ ನಂತರ ರಾಜೀನಾಮೆ ನೀಡಿ ಹೊರಬಂದಿದ್ದರು.