ನವದೆಹಲಿ: ಕರ್ನಾಟಕ ಹೈಕೋರ್ಟ್ನಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳಿಗೆ ನಾಲ್ವರು ವಕೀಲರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿ ಸುಪ್ರೀಂಕೋರ್ಟ್ ಕೊಲಿಜಿಯಂ ಪತ್ರ ಬರೆದಿದೆ. ಅಕ್ಟೋಬರ್ ಆರರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅನಂತ ರಾಮನಾಥ್ ಹೆಗ್ಡೆ, ಸಿದ್ಧಯ್ಯ ರಾಚಯ್ಯ, ಚಪ್ಪುದೀರ್ ಮೊಣ್ಣಪ್ಪ ಪೂಣಚ್ಚ ಹಾಗೂ ಕನ್ನಂಕುಜಿಲ್ ಶ್ರೀಧರನ್ ಹೇಮಲೇಖಾ ಅವರ ಹೆಸರನ್ನ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ಇದನ್ನೂ ಓದಿರಿ: ಮಕ್ಕಳ ಕಳ್ಳಿ ಎಂದು ಭಿಕ್ಷೆ ಬೇಡುತ್ತಿದ್ದ ಮಹಿಳೆ ಮೇಲೆ ಅಮಾನವೀಯ ಹಲ್ಲೆ.. ವಿಡಿಯೋ ವೈರಲ್
ಅಕ್ಟೋಬರ್ 6ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ಟೋಬರ್ 1, 2021ರ ಹೊತ್ತಿಗೆ ಕರ್ನಾಟಕ ಹೈಕೋರ್ಟ್ 45 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆದರೆ, ಇದರ ಒಟ್ಟು ಬಲ 62 ಇರಬೇಕು.