ETV Bharat / bharat

ಜ್ಞಾನವಾಪಿ ಮಸೀದಿ ವಿವಾದ: ಶಿವಲಿಂಗದ ಕಾರ್ಬನ್ ಡೇಟಿಂಗ್ ಸೇರಿ ವೈಜ್ಞಾನಿಕ ಸಮೀಕ್ಷೆ ಮುಂದೂಡಿದ ಸುಪ್ರೀಂ ಕೋರ್ಟ್ - ಭಾರತೀಯ ಪುರಾತತ್ವ ಇಲಾಖೆ

ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ಸಮೀಕ್ಷೆಗೆ ಸದ್ಯಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

Supreme Court
ಸುಪ್ರೀಂ ಕೋರ್ಟ್
author img

By

Published : May 19, 2023, 7:05 PM IST

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ವಿವಾದಿತ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ಸಮೀಕ್ಷೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಮುಂದೂಡಿದೆ. ಇದೇ ವೇಳೆ, ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನ್ಯಾಯ ಪೀಠ ನೋಟಿಸ್ ಜಾರಿ ಮಾಡಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಳೆದ ವರ್ಷ ನಡೆದ ವಿಡಿಯೋಗ್ರಾಫಿಕ್ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿತ್ತು. ಶಿವಲಿಂಗದ ಕಾಲ ನಿರ್ಣಯಕ್ಕಾಗಿ ಭಾರತೀಯ ಪುರಾತತ್ವ ಇಲಾಖೆಗೆ ವೈಜ್ಞಾನಿಕ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶದ ವಿರುದ್ಧ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯು ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯ ಪೀಠವು ಅಲಹಾಬಾದ್ ಹೈಕೋರ್ಟ್‌ನ ಆದೇಶದಲ್ಲಿರುವ ನಿರ್ದೇಶನಗಳ ಅನುಷ್ಠಾನವನ್ನು ಮುಂದಿನ ವಿಚಾರಣೆಯ ದಿನಾಂಕದವರೆಗೆ ಮುಂದೂಡಲಾಗುವುದು ಎಂದು ಹೇಳಿ ಶಿವಲಿಂಗದ ಕಾರ್ಬನ್ ಡೇಟಿಂಗ್​ಗೆ ತಡೆ ನೀಡಿದೆ. ಜೊತೆಗೆ ಈ ಸಂಬಂಧ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಸೋಮವಾರದಿಂದ ಕಾರ್ಬನ್ ಡೇಟಿಂಗ್ ಮತ್ತು ಸಮೀಕ್ಷೆ ಆರಂಭವಾಗಲಿದೆ ಎಂದು ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ ಪೀಠಕ್ಕೆ ತಿಳಿಸಿದರು. ಉತ್ತರ ಪ್ರದೇಶ ರಾಜ್ಯದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಒಂದು ಕಡೆ ಶಿವಲಿಂಗ ಎಂದು ಹೇಳಲಾಗುವ ಮತ್ತು ಇನ್ನೊಂದು ಕಡೆ ಕಾರಂಜಿ ಎಂದು ಕರೆಯುವ ರಚನೆಗೆ ಯಾವುದೇ ಹಾನಿಯಾಗಬಾರದು ಎಂದು ಮನವಿ ಸಲ್ಲಿಸಿದರು. ಈ ಪ್ರಕರಣದಲ್ಲಿ ಹಿಂದೂ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವಿಷ್ಣು ಶಂಕರ್ ಜೈನ್, ಕಟ್ಟಡಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಎಎಸ್‌ಐ ತಜ್ಞರು ಈಗಾಗಲೇ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಶಿವಲಿಂಗದ ಉದ್ದೇಶಿತ ವೈಜ್ಞಾನಿಕ ಸಮೀಕ್ಷೆಯನ್ನು ಸದ್ಯಕ್ಕೆ ಮುಂದೂಡುವ ಮನವಿಗೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡು ಕೂಡ ಒಪ್ಪಿಕೊಂಡಿವೆ.

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಜ್ಞಾನವಾಪಿ ಮಸೀದಿ ಇದೆ. ಕಳೆದ ವರ್ಷ ಮೇ 16ರಂದು ಮಸೀದಿ ಆವರಣದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ನಡೆದ ಸಮೀಕ್ಷೆಯ ಸಮಯದಲ್ಲಿ ಒಂದು ರಚನೆ ಪತ್ತೆಯಾಗಿದೆ. ಇದನ್ನು ಹಿಂದೂಗಳ ಶಿವಲಿಂಗ ಎಂದು ಹೇಳುತ್ತಿದ್ದರೆ, ಮುಸ್ಲಿಮರು ಕಾರಂಜಿ ಎಂದು ವಾದ ಮಾಡುತ್ತಿದ್ದಾರೆ.

ಈ ಹಿಂದೆ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ಮತ್ತು ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು. ಕೆಳ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಲಕ್ಷ್ಮೀದೇವಿ ಮತ್ತು ಇತರ ಮೂವರು ಅರ್ಜಿದಾರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆಗ ಶಿವಲಿಂಗದ ವೈಜ್ಞಾನಿಕ ತನಿಖೆಯನ್ನು ನಡೆಸಲು ಹಿಂದೂ ಆರಾಧಕರು ಸಲ್ಲಿಸಿದ ಅರ್ಜಿಯನ್ನು ಕಾನೂನಿಗೆ ಅನುಸಾರವಾಗಿ ಮುಂದುವರಿಸಲು ವಾರಣಾಸಿ ಜಿಲ್ಲಾ ನ್ಯಾಯಾಧೀಶರಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ: ಶಿವಲಿಂಗದ ವೈಜ್ಞಾನಿಕ ತನಿಖೆಗೆ ಹಿಂದೂ ಸಂಘಟನೆ ಆಗ್ರಹ; ಮುಸ್ಲಿಂ ಸಂಘಟನೆ ವಿರೋಧ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.