ನವದೆಹಲಿ: ಲಾಕ್ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಕಾರಣದಿಂದಾಗಿ ಸರ್ಕಾರದ ವಶದಲ್ಲಿರುವ ತಬ್ಲಿಘಿ ಜಮಾತ್ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿ ಪ್ರಜೆಗಳನ್ನು ತಮ್ಮ ದೇಶಗಳಿಗೆ ವಾಪಸ್ ಕಳುಹಿಸಲು ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್, ನ್ಯಾಯಮೂರ್ತಿ ಬಿ.ಆರ್.ಗವಾಯ್, ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರಿದ್ದ ಪೀಠ ಈ ರೀತಿಯ ನಿರ್ದೇಶನ ನೀಡಿದ್ದು, ಒಂದು ವೇಳೆ ಅವರು ತಮ್ಮ ಸ್ವದೇಶಕ್ಕೆ ಹಿಂದಿರುಗಲು ಯಾವುದಾದರೂ ಸಮಸ್ಯೆ ಕಂಡುಬಂದರೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಕಚೇರಿಯನ್ನು ಸಂಪರ್ಕಿಸುವಂತೆ ವಿದೇಶಿ ಪ್ರಜೆಯ ವಕೀಲರಿಗೆ ಸೂಚಿಸುವಂತೆ ಸುಪ್ರೀಂ ಹೇಳಿದೆ.
ಇದನ್ನೂ ಓದಿ:ಇಂಗ್ಲೆಂಡ್ನಲ್ಲಿ ರೂಪ ಬದಲಿಸಿದ ಕೊರೊನಾ ವೈರಸ್: ಭಾರತದಲ್ಲಿ ಮುಂಜಾಗ್ರತೆ
ತಬ್ಲಿಘಿ ಜಮಾತ್ನಲ್ಲಿ ಪಾಲ್ಗೊಂಡಿದ್ದ ವಿದೇಶಿಗರ ಅರ್ಜಿ ವಿಚಾರಣೆ ವೇಳೆ ಈ ರೀತಿಯ ಹೇಳಿಕೆಯನ್ನು ಸುಪ್ರೀಂಕೋರ್ಟ್ ನೀಡಿದ್ದು, ಈಗಲೂ ವಿವಿಧ ರಾಜ್ಯಗಳಲ್ಲಿ ಕೆಲವೊಂದು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.
ಜಾರ್ಖಂಡ್ನಲ್ಲಿ ವಿದೇಶಿಗರ ವಿರುದ್ಧ ದಾಖಲಾಗಿರುವ ಎರಡು ಎಫ್ಐಆರ್ಗಳ ಬಗ್ಗೆ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಲಾಗಿದ್ದು, ಎರಡು ತಿಂಗಳಿನಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.