ನವದೆಹಲಿ: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ತನ್ನ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿಕೊಂಡಿರುವ ಎಫ್ಐಆರ್ ಅನ್ನ ರದ್ದುಗೊಳಿಸಬೇಕೆಂದು ಕೋರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಎಂ.ಆರ್.ಶಾ ಅವರಿದ್ದ ದ್ವಿಸದಸ್ಯ ಪೀಠವು ಅನಿಲ್ ದೇಶಮುಖ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿಹಿಡಿಸಿದೆ.
ಕೆಲವು ದಿನಗಳ ಹಿಂದೆ ಬಾಂಬೆ ಹೈಕೋರ್ಟ್ ಸಿಬಿಐ ದಾಖಲಿಸಿಕೊಂಡಿದ್ದ ಎಫ್ಐಆರ್ ರದ್ದು ಮಾಡಲು ನಿರಾಕರಿಸಿದ್ದು, ಈ ತೀರ್ಪಿನಲ್ಲಿ ಯಾವುದೇ ತಪ್ಪುಗಳು ಇಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಅನಿಲ್ ದೇಶಮುಖ್ ವಿರುದ್ಧ ಸಿಬಿಐ ತನಿಖೆಗೆ ನಡೆಸಬಾರದು ಎಂಬ ಕುರಿತು ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಲಾಗಿದ್ದು, ಸರ್ಕಾರ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ತನ್ನ ಸರ್ಕಾರದ ಮಾಜಿ ಸಚಿವರನ್ನು ರಕ್ಷಿಸಬಾರದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: ಗುರುದೇವ ರವೀಂದ್ರನಾಥ ಟ್ಯಾಗೋರ್ ಚರ್ಮದ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ